ಮುಂಬೈ: ಭಾರೀ ಮಳೆಯಿಂದ ಗೋಡೆ ಕುಸಿತ: ಮೃತರ ಕುಟುಂಬ ಸದಸ್ಯರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಿಂದ ಕಾಂಪೌಂಡ್ ಗೋಡೆ ಕುಸಿದು ಸಂಭವಿಸಿದ ದುರ್ಘಟನೆಯಲ್ಲಿ ಹಲವು ಮಂದಿ ಸಾವನ್ನಪ್ಪಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದು:ಖ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಿಂದ ಕಾಂಪೌಂಡ್ ಗೋಡೆ ಕುಸಿದು ಸಂಭವಿಸಿದ ದುರ್ಘಟನೆಯಲ್ಲಿ ಹಲವು ಮಂದಿ ಸಾವನ್ನಪ್ಪಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದು:ಖ ವ್ಯಕ್ತಪಡಿಸಿದ್ದಾರೆ.
ಈ ದುರ್ಘಟನೆಯಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ ತಲಾ ಎರಡು ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿಯಿಂದ ಘೋಷಿಸಲಾಗಿದೆ.
ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಪ್ರತ್ಯೇಕ ಘಟನೆಗಳಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ. ಮುಂಬೈ ನಗರ ಜಲಾವೃತಗೊಂಡಿದ್ದು, ಸ್ಥಳೀಯ ರೈಲು ಸಂಚಾರ ಮತ್ತು ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿದೆ.
ಮುಂಬೈನ ಚೆಂಬೂರು ಮತ್ತು ವಿಖ್ರೋಲಿಯಲ್ಲಿ ಗೋಡೆ ಕುಸಿದು ಉಂಟಾದ ಪ್ರಾಣಹಾನಿಯಿಂದ ದುಃಖಿತನಾಗಿದ್ದೇನೆ. ದುಃಖದ ಈ ಸಮಯದಲ್ಲಿ ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುವುದಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


