ರಾಜ್ಯಗಳ ಬಳಿ ಇನ್ನೂ 2.60 ಕೋಟಿ ಡೋಸ್ ಲಸಿಕೆ ಇದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 2.60 ಕೋಟಿ ಡೋಸ್ ಲಸಿಕೆ ಬಳಕೆಯಾಗದೇ ಉಳಿದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 2.60 ಕೋಟಿ ಡೋಸ್ ಲಸಿಕೆ ಬಳಕೆಯಾಗದೇ ಉಳಿದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ದೇಶದಲ್ಲಿ ಕೋವಿಡ್ ಲಸಿಕಾ ಅಭಿಯಾನ ಭರದಿಂದ ಸಾಗಿದ್ದು, ಸಾಕಷ್ಟು ರಾಜ್ಯಗಳಲ್ಲಿ ಲಸಿಕೆ ವಿತರಣೆ ಕಾರ್ಯ ಚುರುಕು ಪಡೆದಿದೆ. ಇದರ ನಡುವೆಯೇ ಹಲವಾರು ರಾಜ್ಯಗಳು ಲಸಿಕೆಗಳ ಕೊರತೆಯನ್ನು ಎದುರಿಸುತ್ತಿರುವ ಕುರಿತು ವರದಿಗಳು ಕೂಡ ಕೇಳಿಬಂದಿದೆ. ಅದಾಗ್ಯೂ 2.60 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಬಾಕಿ ಅಥವಾ ಬಳಕೆಯಾಗದೇ ಉಳಿದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಎಲ್ಲಾ ಮೂಲಗಳ ಮೂಲಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 42,15,43,730 ಡೋಸ್ ಲಸಿಕೆಗಳನ್ನು ನೀಡಲಾಗಿದೆ. ಇದರಲ್ಲಿ, ತ್ಯಾಜ್ಯ ಅಥವಾ ವ್ಯರ್ಥಗಳು ಸೇರಿದಂತೆ ಒಟ್ಟು ಬಳಕೆ 39,55,31,378 ಡೋಸ್ ಗಳು ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಹೆಚ್ಚಿನ ಲಸಿಕೆಗಳ ಲಭ್ಯತೆ, ರಾಜ್ಯಗಳು ಮತ್ತು ಕೇಂದ್ರಾಡಳಿತಗಳಿಗೆ ಲಸಿಕೆ ಲಭ್ಯತೆಯ ಸುಧಾರಿತ ಗೋಚರತೆ ಮತ್ತು ಅವುಗಳಿಂದ ಉತ್ತಮ ಯೋಜನೆಯನ್ನು ಸಕ್ರಿಯಗೊಳಿಸಲು ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುವ್ಯವಸ್ಥಿತಗೊಳಿಸುವುದರ ಮೂಲಕ ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ಹೆಚ್ಚಿಸಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


