ದೇಶ

ದೇಶದಲ್ಲಿ ಕೋವಿಡ್-19 ಲಸಿಕೆ ಪಡೆದವರ ಸಂಖ್ಯೆ 41 ಕೋಟಿ ದಾಟಿದೆ: ಕೇಂದ್ರ ಆರೋಗ್ಯ ಸಚಿವಾಲಯ

ದೇಶದಲ್ಲಿ ಕೋವಿಡ್-19 ಲಸಿಕೆ ಪಡೆದವರ ಸಂಖ್ಯೆ 41 ಕೋಟಿಯನ್ನು ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ದೇಶದಲ್ಲಿ ಕೋವಿಡ್-19 ಲಸಿಕೆ ಪಡೆದವರ ಸಂಖ್ಯೆ 41 ಕೋಟಿ ದಾಟಿದೆ: ಕೇಂದ್ರ ಆರೋಗ್ಯ ಸಚಿವಾಲಯ
ಲಸಿಕೆ ಪಡೆಯುತ್ತಿರುವ ಹಿರಿಯ ಮಹಿಳೆಯ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕೋವಿಡ್-19 ಲಸಿಕೆ ಪಡೆದವರ ಸಂಖ್ಯೆ 41 ಕೋಟಿಯನ್ನು ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಸಂಜೆ ಏಳು ಗಂಟೆಯವರೆಗಿನ ತಾತ್ಕಾಲಿಕ ವರದಿ ಪ್ರಕಾರ, ಸೋಮವಾರದವರೆಗೂ 47,77,697 ಡೋಸ್ ಲಸಿಕೆಗಳನ್ನು ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.

18-44 ವರ್ಷದೊಳಗಿನ 22,38,900 ಜನರಿಗೆ ಲಸಿಕೆಯ ಮೊದಲ ಡೋಸ್ ಮತ್ತು 1,48,075  ಜನರಿಗೆ ಲಸಿಕೆಯ ಎರಡನೇ ಡೋಸ್ ನೀಡಲಾಗಿದೆ ಎಂದು ಸಚಿವಾಲಯ ಸೋಮವಾರ ತಿಳಿಸಿದೆ. 

ಒಟ್ಟಾರೆಯಾಗಿ, ವ್ಯಾಕ್ಸಿನೇಷನ್ ಡ್ರೈವ್ ನ ಹಂತ -3 ಪ್ರಾರಂಭವಾದಾಗಿನಿಂದ 18-44 ವಯಸ್ಸಿನ 12,73,70,809 ಜನರು ತಮ್ಮ ಮೊದಲ ಡೋಸ್ ಮತ್ತು 50,58,284 ಜನರು ತಮ್ಮ ಎರಡನೇ ಡೋಸ್ ಅನ್ನು ಪಡೆದಿದ್ದಾರೆ.

ಮೂರು ರಾಜ್ಯಗಳಾದ ಮಧ್ಯ ಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ  18-44 ವಯೋಮಾನದ 1 ಕೋಟಿಗೂ ಹೆಚ್ಚು ಜನರಿಗೆ ಮೊದಲ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ.

ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದ 18-44 ವರ್ಷದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಲಸಿಕೆಯ ಮೊದಲ‌ ಡೋಸ್ ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.