ರಾಜ್ಯಸಭೆಯ ಉಪ ನಾಯಕ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ಹೆಸರು!
ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪ ನಾಯಕ ಸ್ಥಾನಕ್ಕೆ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪನಾಯಕ ಸ್ಥಾನಕ್ಕೆ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯಸಭೆಯಲ್ಲಿ ಸದನ ನಾಯಕರಾಗಿ ನೇಮಕಗೊಂಡಿರುವ ಪಿಯೂಷ್ ಗೋಯಲ್ ಅವರ ನಂತರದ ಸ್ಥಾನದಲ್ಲಿ ನಖ್ವಿ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಸ್ತುತ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿರುವ ನಖ್ವಿ ಅವರು ಸಂಸದೀಯ ವ್ಯವಹಾರಗಳ ಬಗ್ಗೆ ವ್ಯಾಪಕ ಜ್ಞಾನ ಹೊಂದಿದ್ದು, ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ರಾಜಕೀಯ ವಲಯದಲ್ಲಿ ಬಹುತೇಕ ಎಲ್ಲ ನಾಯಕರೊಂದಿಗೆ ಸೌಹಾರ್ದಯುತ ಸಂಬಂಧ ಹೊಂದಿರುವ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪನಾಯಕ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಮಹತ್ವ ಪಡೆದುಕೊಂಡಿದೆ. ಕೋವಿಡ್ ನಿರ್ವಹಣೆ ಇಂಧನ ಬೆಲೆ ಏರಿಕೆ, ಕೋವಿಡ್ ನಿರ್ವಹಣೆ, ರೈತರ ಪ್ರತಿಭಟನೆ ವಿಚಾರವಾಗಿ ಅಧಿವೇಶನದಲ್ಲಿ ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಮುಗಿಬೀಳಲು ಸಿದ್ಧರಾಗಿರುವ ಈ ಹೊತ್ತಿನಲ್ಲಿ ನಖ್ವಿ ಅವರ ಆಯ್ಕೆ ಮೋದಿ ಸರ್ಕಾರ ಎಷ್ಟರಪಟ್ಟಿಗೆ ನೆರವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


