ಇಂದಿನಿಂದ ಸಂಸತ್ ಅಧಿವೇಶನ: ಬೆಲೆ ಏರಿಕೆ, ಕೋವಿಡ್ ವಿಷಯ ಬಳಸಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳ ಸಜ್ಜು
ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಮೊದಲ ದಿವೇ ಕಾವೇರುವ ಸಾಧ್ಯತೆಗಳಿವೆ. ತೈಲ ಬೆಲೆ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೋವಿಡ್ ನಿರ್ವಹಣೆ ವಿಚಾರಗಳ ಹಿಡಿದು ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ.

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಮೊದಲ ದಿವೇ ಕಾವೇರುವ ಸಾಧ್ಯತೆಗಳಿವೆ. ತೈಲ ಬೆಲೆ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೋವಿಡ್ ನಿರ್ವಹಣೆ ವಿಚಾರಗಳ ಹಿಡಿದು ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ.
ಇದೇ ವೇಳೆ ಸರ್ಕಾರವು 17 ವಿಧೇಯಗಳನ್ನು ಮಂಡಿಸಲು ಸಿದ್ಧತೆ ನಡೆಸಿದ್ದು, ಇದರಲ್ಲಿ 3 ಸುಗ್ರೀವಾಜ್ಞೆ ಕೂಡ ಸೇರಿವೆ ಎಂದು ತಿಳಿದುಬಂದಿದೆ.
ಶಸ್ತ್ರಾಸ್ತ್ರ ಉತ್ಪಾದಿಸುವ ಕಾರ್ಖಾನೆಗಳ ನೌಕರರು ಮುಷ್ಕರ ನಡೆಸುವಂತಿಲ್ಲ ಎಂದು ನಿರ್ಬಂಧ ವಿಧಿಸುವ ಸುಗ್ರೀವಾಜ್ಞೆಯ ಇವುಗಳಲ್ಲಿ ಮಹತ್ವವಾದುದು. ದೆಹಲಿ ವಾಯುಗುಣಮಟ್ಟ ಕಾಯುವ ಸುಗ್ರೀವಾಜ್ಞೆ ಕೂಡ ಇದರಲ್ಲಿ ಸೇರಿದೆ. ಆದರೆ, ಆಗಸ್ಟ್ 13ರಂದು ಮುಗಿಯಲಿರುವ ಈ ಅಧಿವೇಶನದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ರೂ.100 ಗಡಿ ದಾಟಿರುವುದು ಪ್ರಮುಖ ವಿಷಯವಾಗುವ ಸಾಧ್ಯತೆಗಳಿವೆ. ಇದನ್ನು ಪ್ರಮುಖವಾಗಿ ಪ್ರಸ್ತಾಪಿಸಿ ಸರ್ಕಾರದಿಂದ ಉತ್ತರ ಬಯಸು ಕಾಂಗ್ರೆಸ್ ಆದಿಯಾಗಿ ವಿವಿಧ ಪಕ್ಷಗಳು ತೀರ್ಮಾನಿಸಿದೆ.
ಇನ್ನು ಕೋವಿಡ್ 2ನೇ ಅಲೆ ವೇಳೆ ಅಪಾರ ಸಾವು ನೋವು ಸಂಭವಿಸಿದ್ದು, ಇದಕ್ಕೆ ಸರ್ಕಾರದ ಆರೋಗ್ಯ ವ್ಯವಸ್ಥೆ ವೈಫಲ್ಯವೇ ಕಾರಣ ಎಂಬುದು ಪ್ರತಿಪಕ್ಷಗಳ ಮುಖ್ಯ ಆರೋಪವಾಗಿದೆ.
ಇದೂ ಕೂಡ ಪ್ರಮುಖ ಚರ್ಚಾ ವಿಷಯವಾಗುವ ಸಾಧ್ಯತೆಗಳಿವೆ. ಇನ್ನು ಪಶ್ಚಿಮ ಬಂಗಾಳದಲ್ಲಿನ ಟಿಎಂಸಿ-ಬಿಜೆಪಿ ರಾಜಕೀಯ ಸಂಘರ್ಷ ಕೂಡ ಕೋಲಾಹಲ ಎಬ್ಬಿಸುವ ಸಾಧ್ಯತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


