ದೇಶ

ಕೋವಿಡ್ ಸಂಬಂಧಿತ ಸರ್ಕಾರದ ಸಭೆಗೆ ಪ್ರತಿಪಕ್ಷ ಕಾಂಗ್ರೆಸ್, ಎಸ್ಎಡಿ ಗೈರು

ಇಂದು ಸಂಜೆ ಕೋವಿಡ್-19 ಕುರಿತು ಎಲ್ಲಾ ಪಕ್ಷಗಳ ಸದನದ ಮುಖಂಡರೊಂದಿಗೆ ನಡೆಯಲಿರುವ ಸರ್ಕಾರದ ಸಭೆಗೆ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಗೈರಾಗುತ್ತಿದೆ. ಈ ಸಭೆಯನ್ನು ಕಾಂಗ್ರೆಸ್ ಬಹಿಷ್ಕರಿಸಿರುವುದಾಗಿ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಕೋವಿಡ್ ಸಂಬಂಧಿತ ಸರ್ಕಾರದ ಸಭೆಗೆ ಪ್ರತಿಪಕ್ಷ ಕಾಂಗ್ರೆಸ್, ಎಸ್ಎಡಿ ಗೈರು
ಮಲ್ಲಿಕಾರ್ಜುನ ಖರ್ಗೆ
Published On :

ನವದೆಹಲಿ: ಇಂದು ಸಂಜೆ ಕೋವಿಡ್-19 ಕುರಿತು ಎಲ್ಲಾ ಪಕ್ಷಗಳ ಸದನದ ಮುಖಂಡರೊಂದಿಗೆ ನಡೆಯಲಿರುವ ಸರ್ಕಾರದ ಸಭೆಗೆ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಗೈರಾಗುತ್ತಿದೆ. ಈ ಸಭೆಯನ್ನು ಕಾಂಗ್ರೆಸ್ ಬಹಿಷ್ಕರಿಸಿರುವುದಾಗಿ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಸಂಸತ್ತಿನ ಉಭಯ ಸದಗಳಲ್ಲಿ ಅಂಶಗಳನ್ನು ಸರ್ಕಾರ ಮಂಡಿಸಬೇಕು, ಅಲ್ಲಿಯವರೆಗೂ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಆಡಳಿತಾರೂಢ ಬಿಜೆಪಿಯ ಮೈತ್ರಿ ಪಕ್ಷ ಎಸ್ ಎಡಿ ಕೂಡಾ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಅದರ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ತಿಳಿಸಿದ್ದಾರೆ.

ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಎಲ್ಲಾ ಪಕ್ಷಗಳ ಸದನಗಳ ಮುಖಂಡರ ಸಭೆಯನ್ನು ಸರ್ಕಾರ ಕರೆದಿದೆ. ಸಭೆಯಲ್ಲಿ ಆರೋಗ್ಯ ಕಾರ್ಯದರ್ಶಿ ವಿವರ ಪ್ರಸ್ತುತಪಡಿಸುವ ನಿರೀಕ್ಷೆಯಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.