ದೇಶದಲ್ಲಿ ಹಕ್ಕಿ ಜ್ವರದಿಂದ ಮೃತಪಟ್ಟ ಮೊದಲ ಪ್ರಕರಣ ವರದಿ
ದೇಶದಲ್ಲಿ ಹಕ್ಕಿ ಜ್ವರದಿಂದ ಸಾವನ್ನಪ್ಪಿರುವ ಮೊದಲ ಪ್ರಕರಣ ದೆಹಲಿಯ ಏಮ್ಸ್ ನಲ್ಲಿ ವರದಿಯಾಗಿದೆ.

ನವದೆಹಲಿ: ದೇಶದಲ್ಲಿ ಹಕ್ಕಿ ಜ್ವರದಿಂದ ಸಾವನ್ನಪ್ಪಿರುವ ಮೊದಲ ಪ್ರಕರಣ ದೆಹಲಿಯ ಏಮ್ಸ್ ನಲ್ಲಿ ವರದಿಯಾಗಿದೆ.
ಈ ವರ್ಷದ ಮೊದಲ ಸಾವಿನ ಪ್ರಕರಣ ಇದಾಗಿದ್ದು, ಏಮ್ಸ್ ನ ಪೀಡಿಯಾಟ್ರಿಕ್ ವಿಭಾಗದಲ್ಲಿ H5N1 ಏವಿಯನ್ ಫ್ಲೂ ಗೆ ಚಿಕಿತ್ಸೆ ಪಡೆಯುತ್ತಿದ್ದ 12 ವರ್ಷದ ಬಾಲಕ ಮೃತ ದುರ್ದೈವಿಯಾಗಿದ್ದಾರೆ.
ನ್ಯುಮೋನಿಯಾ ಹಾಗೂ ರಕ್ತಕ್ಯಾನ್ಸರ್ ನಿಂದ ಬಳಲುತ್ತಿದ್ದ ಈ ಬಾಲಕನಿಗೆ ಏಮ್ಸ್ ನ ಐಸಿಯು ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಬಾಲಕನ ಸಂಪರ್ಕಕ್ಕೆ ಬಂದಿದ್ದ ಸಿಬ್ಬಂದಿಗಳು ತಮ್ಮ ಆರೋಗ್ಯ ಹಾಗೂ ಲಕ್ಷಣಗಳ ಬಗ್ಗೆ ನಿಗಾ ವಹಿಸಬೇಕೆಂದು ಏಮ್ಸ್ ಅಧಿಕಾರಿಗಳು ಹೇಳಿದ್ದಾರೆ. H5N1 ಏವಿಯನ್ ಫ್ಲೂ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುತ್ತದೆ ಹಾಗೂ ಮನುಷ್ಯರಲ್ಲಿಯೂ ಇದು ಹರಡಬಹುದಾಗಿದೆ. ರೋಗಪೀಡಿತ ಹಕ್ಕಿಗಳಿಂದ ಮನುಷ್ಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತದೆ ಹಾಗೂ ಮನುಷ್ಯರಿಂದ ಮನುಷ್ಯರಿಗೂ ಹರಡುವ ಸಾಮರ್ಥ್ಯ ಹೊಂದಿದೆ.ಸೋಂಕು ತಗುಲಿದರೆ ಮಾರಣ ಪ್ರಮಾಣ ಶೇ.60 ರಷ್ಟಿದೆ. ಹೆಚ್5ಎನ್1 ವೈರಾಣು ಮರಣ ಪ್ರಮಾಣವನ್ನು ಹೆಚ್ಚಿರುವ ತೀವ್ರವಾದ ಶೀತಜ್ವರವನ್ನು ಉಂಟುಮಾಡುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


