ರಾಜ್ಯಸಭೆ: ಕೋವಿಡ್ ಸಂಬಂಧಿತ ವಿಚಾರಗಳಿಗೆ ಸರ್ಕಾರದಿಂದ ಸಂಜೆ 5ಕ್ಕೆ ಉತ್ತರ
ಕೋವಿಡ್ ಸಂಬಂಧಿತ ವಿಚಾರಗಳಿಗೆ ಕೇಂದ್ರ ಸರ್ಕಾರ ಸಂಜೆ 5 ಗಂಟೆಗೆ ಉತ್ತರ ನೀಡಲಿದೆ ಎಂದು ರಾಜ್ಯಸಭೆ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಅವರು ಹೇಳಿದ್ದಾರೆ.

ನವದೆಹಲಿ: ಕೋವಿಡ್ ಸಂಬಂಧಿತ ವಿಚಾರಗಳಿಗೆ ಕೇಂದ್ರ ಸರ್ಕಾರ ಸಂಜೆ 5 ಗಂಟೆಗೆ ಉತ್ತರ ನೀಡಲಿದೆ ಎಂದು ರಾಜ್ಯಸಭೆ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಅವರು ಹೇಳಿದ್ದಾರೆ.
ಇಂದು ಕಲಾಪ ಆರಂಭಕ್ಕೂ ಮುನ್ನ ರಾಜ್ಯಸಭೆಯ ವಿಪಕ್ಷ ಮುಖಂಡರು ರಾಜ್ಯಸಭಾಧ್ಯಕ್ಷ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ ಕೋವಿಡ್ ಸಂಬಂಧಿತ ವಿಚಾರಗಳಿಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಮನವಿ ನೀಡಿದ್ದರು. ಇದಕ್ಕೆ ಸ್ಪಂದಿಸಿರುವ ವೆಂಕಯ್ಯ ನಾಯ್ಡು ಅವರು ಇಂದು ಸಂಜೆ 5 ಗಂಟೆಗೆ ಸರ್ಕಾರಕ್ಕೆ ಉತ್ತರಿಸಲು ಸಮಯಾವಕಾಶ ನೀಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ರಾಜ್ಯಸಭೆ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಅವರು, 'ಕೋವಿಡ್-19 ವಿಚಾರವಾಗಿ ಚರ್ಚೆಸಲು ಎಲ್ಲಾ ನಾಯಕರು ಬಯಸಿದ್ದು, ಈ ಸಂಬಂಧ ರಾಜ್ಯಸಭಾ ಅಧ್ಯಕ್ಷರು ಒಪ್ಪಿಗೆ ನೀಡಿದ್ದಾರೆ. ಮಧ್ಯಾಹ್ನ ಇದರ ಬಗ್ಗೆ ಚರ್ಚಿಸಲಾಗುವುದು. ನಾಲ್ಕು ಗಂಟೆಗಳ ಕಾಲ ಕೋವಿಡ್ ವಿಚಾರಗಳ ಕುರಿತು ಚರ್ಚಿಸಲಾಗುವುದು ಎಂದು ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಸಂಜೆ 5 ಗಂಟೆಗೆ ಈ ಕುರಿತು ಉತ್ತರಿಸಲಿದ್ದಾರೆ ಎಂದು ಹೇಳಿದರು.
ಮೂಲಗಳ ಪ್ರಕಾರ, ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು, ಸದನ ಮುಖಂಡ ಪಿಯೂಷ್ ಗೋಯಲ್ ಮತ್ತು ಪ್ರತಿಪಕ್ಷ ನಾಯಕರಾದ ಆನಂದ್ ಶರ್ಮಾ, ಜೈರಾಮ್ ರಮೇಶ್, ಡೆರೆಕ್ ಒ'ಬ್ರಿಯೆನ್ ಮತ್ತು ತಿರುಚಿ ಶಿವಾ ಅವರು ಸಭೆ ನಡೆಸಿ ಚರ್ಚಿಸಿದರು ಎನ್ನಲಾಗಿದೆ. ಸದನದ ಕಾರ್ಯ ಪುನರಾರಂಭಕ್ಕೆ ಸಹಕಾರ ಕೋರಿ ಪಿಯೂಷ್ ಗೋಯಲ್ ಈ ಹಿಂದೆ ಪ್ರತಿಪಕ್ಷ ನಾಯಕರೊಂದಿಗೆ ಅನೌಪಚಾರಿಕ ಚರ್ಚೆ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.
ಸದನದ ಮೊದಲ ಮುಂದೂಡಿಕೆಯ ನಂತರ ಮಧ್ಯಾಹ್ನ 12 ಗಂಟೆಯವರೆಗೆ ಗೋಯಲ್ ಅವರು ವಿರೋಧ ಪಕ್ಷದ ನಾಯಕರೊಂದಿಗೆ ನಾಯ್ಡು ಅವರನ್ನು ಭೇಟಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


