ದೇಶ

ಕೆಆರ್‌ಎಸ್‌ ಜಲಾಶಯಕ್ಕೆ ಅಪಾಯ ವಿಷಯ ಕೇಂದ್ರದ ಅಂಗಳಕ್ಕೆ: ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಸುಮಲತಾ

ಅಕ್ರಮ ಗಣಿಗಾರಿಕೆಯಿಂದ ವಿಶ್ವವಿಖ್ಯಾತ ಕೆಆರ್ ಎಸ್ ಜಲಾಶಯಕ್ಕೆ ಅಪಾಯ ಉಂಟಾಗುತ್ತಿದ್ದು ಇದರ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಿ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಜಲಾಶಯದ ಸುರಕ್ಷತೆ ಕಾಪಾಡುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ.

ಕೆಆರ್‌ಎಸ್‌ ಜಲಾಶಯಕ್ಕೆ ಅಪಾಯ ವಿಷಯ ಕೇಂದ್ರದ ಅಂಗಳಕ್ಕೆ: ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಸುಮಲತಾ
ಗಜೇಂದ್ರ ಸಿಂಗ್-ಸುಮಲತಾ
Published On :

ನವದೆಹಲಿ: ಅಕ್ರಮ ಗಣಿಗಾರಿಕೆಯಿಂದ ವಿಶ್ವವಿಖ್ಯಾತ ಕೆಆರ್ ಎಸ್ ಜಲಾಶಯಕ್ಕೆ ಅಪಾಯ ಉಂಟಾಗುತ್ತಿದ್ದು ಇದರ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಿ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಜಲಾಶಯದ ಸುರಕ್ಷತೆ ಕಾಪಾಡುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಜಲಾಶಯಕ್ಕೆ ಭವಿಷ್ಯದಲ್ಲಿ ಅಪಾಯ ತಲೆದೋರಲಿದೆ ಇದರ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಸುವಂತೆ ಮನವಿ ಮಾಡಿದ್ದಾರೆ. 

ಕೆಆರ್ ಎಸ್ ಅಣೆಕಟ್ಟು ಸುತ್ತ 15 ಕಿಲೋಮೀಟರ್ ವ್ಯಾಪ್ತಿಯೊಳಗೆ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ನಿರ್ಬಂದ ಹಾಕಬೇಕು ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುಮಲತಾ ಕೆ.ಆರ್.ಎಸ್ ಅಣೆಕಟ್ಟೆಗೆ ಅಕ್ರಮ ಗಣಿಗಾರಿಕೆಯಿಂದ ಮುಂದೆ ಬರಲಿರುವ  ಅಪಾಯವನ್ನು ಅರಿತು ಈ ವಿಚಾರವಾಗಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.