ಇಂದು ಬಕ್ರೀದ್ ಹಬ್ಬದ ಸಂಭ್ರಮ: ಮುಸ್ಲಿಂ ಬಾಂಧವರಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಶುಭಾಶಯ
ಈದ್-ಉಲ್-ಅಧಾವನ್ನು ಭಾರತದಾದ್ಯಂತ ಬುಧವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಭಾಶಯಗಳನ್ನು ಕೋರಿದ್ದಾರೆ.

ನವದೆಹಲಿ: ಈದ್-ಉಲ್-ಅಧಾವನ್ನು ಭಾರತದಾದ್ಯಂತ ಬುಧವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಈದ್-ಉಲ್-ಅಧಾದದ ಶುಭಾಶಯಗಳು. ಸಾಮೂಹಿಕ ಅನುಭೂತಿ, ಸಾಮರಸ್ಯ ಮತ್ತು ಒಳ್ಳೆಯ ಸೇವೆಯಲ್ಲಿ ಸೇರ್ವಡಿಸುವಂತಹ ಮನೋಭಾವವನ್ನು ಹೆಚ್ಚಿಸಲಿ ಎಂದು ಹೇಳಿದ್ದಾರೆ
ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಬಕ್ರೀದ್ ಹಬ್ಬದ ವಿಶೇಷವಾಗಿ ದೇಶದ ಮುಸ್ಲಿಮರಿಗೆ ಉರ್ದು ಭಾಷೆಯಲ್ಲಿ ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದು, ಜನರು ಕೊವಿಡ್ 19 ಸುರಕ್ಷತಾ ಮಾರ್ಗ ಸೂಚಿಗಳನ್ನು ಅನುಸರಿಸುವಂತೆ ಹೇಳಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಟ್ವೀಟ್ ಮಾಡಿ, ತ್ಯಾಗ, ಬಲಿದಾನಗಳ ಪ್ರತೀಕವಾದ ಬಕ್ರೀದ್ ಹಬ್ಬ ಸರ್ವರಿಗೂ ಮಂಗಳ ತರಲಿ. ಪರಸ್ಪರ ಸಹೋದರತೆ, ಐಕ್ಯತೆಯನ್ನು ಇನ್ನಷ್ಟು ಬಲಪಡಿಸಲಿ ಎಂದು ಶುಭ ಕೋರಿದ್ದಾರೆ.
ಮುಸ್ಲಿಮರು ವಿಜೃಂಭಣೆಯಿಂದ ಆಚರಿಸುವ ಹಬ್ಬಗಳಲ್ಲಿ ಬಕ್ರೀದ್ ಕೂಡಾ ಒಂದು. ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಕೈಗೊಳ್ಳುವ ಮೂಲಕ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ.
4,000 ವರಷಗಳ ಹಿಂದೆ ಪ್ರವಾದಿ ಅಬ್ರಾಹಿಂ ಕನಸಿನಲ್ಲಿ ಅಲ್ಲಾಹ್ನರನ್ನು ಕಂಡರು. ತಾನು ಹೆಚ್ಚಾಗಿ ಪ್ರೀತಿಸುವವರನ್ನು ತ್ಯಾಗ ಮಾಡುವ ಸಂದರ್ಭ ಬಂದಾಗ ತಾನು ಹೆಚ್ಚಾಗಿ ಪ್ರೀತಿಸುವ ಏಕೈಕ ಪುತ್ರನನ್ನು ತ್ಯಾಗ ಮಾಡಲು ಮುಂದಾದರು. ಕೊನೆಗೆ ಇಬ್ರಾಹಿಂ ತನ್ನ ಮಗನನ್ನು ಬಲಿಕೊಡಲು ಬಲಿಪೀಠದಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಾರೆ. ತನ್ನ ಮಗನ ಕುತ್ತಿಗೆಯ ಭಾಗಕ್ಕೆ ಕತ್ತರಿಸಲು ಮುಂದಾಗುತ್ತಾರೆ.
ಈ ವೇಳೆ ಅವನಿಗೆ ಅನೇಕ ಅಡೆ-ತಡೆಗಳು ಎದುರಾಗುತ್ತವೆ. ಮಗನ ಕುತ್ತಿಗೆಗೆ ಕತ್ತಿ ತರುತ್ತಿದ್ದಂತೆ ಇಸ್ಮಾಯಿಲ್ ಮಾಯವಾಗಿ ಆತನ ಜಾಗದಲ್ಲಿ ಕುರಿಯೊಂದು ಕಾಣಿಸಿಕೊಳ್ಳುತ್ತದೆ. ಅಲ್ಲಾಹನು ಪ್ರವಾದಿ ಇಬ್ರಾಹಿಂರ ಭಕ್ತಿ, ನಂಬಿಕೆ, ವಿಶ್ವಾಸವನ್ನು ಪರೀಕ್ಷಿಸಿದ್ದು ಇದರಲ್ಲಿ ಪ್ರವಾದಿ ಉತ್ತೀರ್ಣರಾಗಿದ್ದಾರೆ. ಹೀಗಾಗಿ ಈ ಹಬ್ಬವನ್ನು ಬಲಿದಾನ, ತ್ಯಾಗದ ಸಂಕೇತವಾಗಿ ಆಚರಿಸಲಾಗುತ್ತೆ. ತ್ಯಾಗದ ಕಥೆಯನ್ನು ಹಿಬ್ರೂ ಬೈಬಲ್ನಲ್ಲಿ ಉಲ್ಲೇಖಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


