ಜಮ್ಮು: ಸ್ಫೋಟಕ ಸಾಗಿಸುತ್ತಿದ್ದ ಡ್ರೋಣ್ ಹೊಡೆದುರುಳಿಸಿದ ಪೊಲೀಸರು
ಜಮ್ಮು ನಗರ ಹೊರವಲಯದ ಕನ್ಹಚಾಕ್ ಪ್ರದೇಶದ ಅಂತಾರಾಷ್ಟ್ರೀಯ ಗಡಿಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಅಳವಡಿಸಿದ್ದ ಡ್ರೋಣ್ ವೊಂದನ್ನು ಜಮ್ಮು-ಕಾಶ್ಮೀರ ಪೊಲೀಸರು ಶುಕ್ರವಾರ ಹೊಡೆದುರುಳಿಸಿದ್ದಾರೆಂದು ತಿಳಿದುಬಂದಿದೆ.

ಜಮ್ಮು: ಜಮ್ಮು ನಗರ ಹೊರವಲಯದ ಕನ್ಹಚಾಕ್ ಪ್ರದೇಶದ ಅಂತಾರಾಷ್ಟ್ರೀಯ ಗಡಿಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಅಳವಡಿಸಿದ್ದ ಡ್ರೋಣ್ ವೊಂದನ್ನು ಜಮ್ಮು-ಕಾಶ್ಮೀರ ಪೊಲೀಸರು ಶುಕ್ರವಾರ ಹೊಡೆದುರುಳಿಸಿದ್ದಾರೆಂದು ತಿಳಿದುಬಂದಿದೆ.
ಕಳೆದ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕನ್ಹಚಾಕ್ ಪ್ರದೇಶದಲ್ಲಿ ಡ್ರೋಣ್ ಅನ್ನು ಹೊಡೆದುರುಳಿಸಿ, ವಶಪಡಿಸಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.
ಅಂತರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಹಾರಾಡುತ್ತಿದ್ದ ವಸ್ತುವೊಂದನ್ನು ಗಮನಿಸಿದ ಪೊಲೀಸರು ಕೂಡಲೇ ಕೆಲ ಸುತ್ತು ಗುಂಡು ಹಾರಿಸಿದ್ದಾರೆ.
ಸ್ಪೋಟಕಗಳನ್ನು ಹೊತ್ತ ಡ್ರೋನ್, ಅಂತರರಾಷ್ಟ್ರೀಯ ಗಡಿಯಲ್ಲಿ 7 ರಿಂದ 8 ಕಿಲೋಮೀಟರ್ ಒಳಭಾಗದಲ್ಲಿ ಹಾರಾಟ ನಡೆಸುತ್ತಿತ್ತು ಎಂದು ಮೂಲಗಳು ಮಾಹಿತಿ ನೀಡಿವೆ.
ಡ್ರೋಣ್'ನ್ನು ಹೊಡೆದುರುಳಿಸಿರುವ ಡ್ರೋಣ್'ನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಅದರಿಂದ ಐದು ಕೆಜಿ ತೂಕದ ಐಇಡಿ ಸ್ಪೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


