ದೇಶ

ನಾಳೆ ಐಸಿಎಸ್ ಇ, ಐಎಸ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಐಸಿಎಸ್ ಇ (ಹತ್ತನೆ ತರಗತಿ ) ಮತ್ತು ಐಎಸ್ ಸಿ( 12ನೇ ತರಗತಿ) ಪರೀಕ್ಷಾ ಫಲಿತಾಂಶ ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮೀನೇಷನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ ಐಸಿಎಸ್ ಇ, ಐಎಸ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಐಸಿಎಸ್ ಇ (ಹತ್ತನೆ ತರಗತಿ) ಮತ್ತು ಐಎಸ್ ಸಿ (12ನೇ ತರಗತಿ) ಪರೀಕ್ಷಾ ಫಲಿತಾಂಶ ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮೀನೇಷನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಕೌನ್ಸಿಲ್ ವೆಬ್ ಸೈಟ್ ಮತ್ತು ಮೊಬೈಲ್ ಮೂಲಕ 2021ನೇ ಸಾಲಿನ ಐಸಿಎಸ್ ಇ ಮತ್ತು ಐಎಸ್ ಸಿ ಪರೀಕ್ಷಾ ಫಲಿತಾಂಶವನ್ನು ಪಡೆಯಬಹುದಾಗಿದೆ ಅಲ್ಲದೇ, ಮೊಬೈಲ್ ಸಂದೇಶದ ಮೂಲಕವೂ ಪಡೆಯಬಹುದಾಗಿದೆ ಎಂದು ಕೌನ್ಸಿಲ್ ಮಾಹಿತಿ ನೀಡಿದೆ. ಶಾಲೆಗಳಲ್ಲಿ ಪ್ರಾಂಶುಪಾಲರ ಲಾಗಿನ್​ ಐಡಿ ಮತ್ತು ಪಾಸ್​ವರ್ಡ್​ ಬಳಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕೆರಿಯರ್​ ಪೊರ್ಟಲ್​ ಅಲ್ಲಿ ಕೂಡ ಪಡೆಯಬಹುದಾಗಿದೆ.

ಈ ಬಾರಿ ಪರೀಕ್ಷೆ ನಡೆಯದ ಕಾರಣ ಐಸಿಎಸ್​ಇ ಮತ್ತು ಐಎಸ್ಸಿ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಲು ಸಾಧ್ಯವಿಲ್ಲ. ಒಂದು ವೇಳೆ ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶದ ಕುರಿತು ಆಕ್ಷೇಪಣೆ ಇದ್ದರೆ ಅದನ್ನು ಯಾವ ಕಾರಣದಿಂದ ಮರು ಮೌಲ್ಯಮಾಪನ ನಡೆಸಬೇಕು ಎಂಬ ಸವಿವರದೊಂದಿಗೆ ತಮ್ಮ ಶಾಲೆಗೆ ಅರ್ಜಿ ಹಾಕಬೇಕು ಎಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.