ಸೊಪೋರ್ ಎನ್ಕೌಂಟರ್: ಇಬ್ಬರು ಎಲ್ಇಟಿ ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಬಾರಾಮುಲ್ಲಾ ಜಿಲ್ಲೆಯ ಸೊಪೋರ್'ನ ವಾರ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡಿದ್ದಾರೆ. ಉಗ್ರರು ಅಡಗಿರುವುದನ್ನು ಖಚಿತಪಡಿಸಿಕೊಂಡ ಭದ್ರತಾ ಪಡೆಗಳು ಮೊದಲಿಗೆ ಶರಣಾಗುವ ಅವಕಾಶವನ್ನು ನೀಡಿದ್ದಾರೆ. ಆದರೆ, ಉಗ್ರರು ಈ ಅವಕಾಶವನ್ನು ನಿರಾಕರಿಸಿದ್ದಾರೆ. ಬಳಿಕ ಎನ್ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.
ಹತ್ಯೆಯಾದ ಇಬ್ಬರೂ ಉಗ್ರರು ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಇಬ್ಬರ ಪೈಕಿ ಒಬ್ಬ ಫಯಾಜ್ ವಾರ್ ಎಂದು ಗುರ್ತಿಸಲಾಗಿದ್ದು, ಈತ ಕಾಶ್ಮೀರದಲ್ಲಿ ನಡೆದಿದ್ದ ಹಲವು ದಾಳಿಯಲ್ಲಿ ಭಾಗಿಯಾಗಿದ್ದ. ಅಲ್ಲದೆ, ಸಾಕಷ್ಟು ನಾಗರೀಕರು ಹಾಗೂ ಭದ್ರತಾಪಡೆಗಳ ಸಿಬ್ಬಂದಿಯನ್ನೂ ಹತ್ಯೆ ಮಾಡಿದ್ದ ಎಂದು ಕಾಶ್ಮೀರದ ಐಜಿಪಿ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


