ಆಗಸ್ಟ್1 ರಿಂದ ರಾಷ್ಟ್ರಪತಿ ಭವನ ಸಾರ್ವಜನಿಕರ ವೀಕ್ಷಣೆಗೆ ಮುಕ್ತ
ಕೋವಿಡ್-19 ಸಾಂಕ್ರಾಮಿಕದಿಂದ ಏಪ್ರಿಲ್ ಮಧ್ಯಭಾಗದಿಂದ ಮುಚ್ಚಲ್ಪಟ್ಟಿರುವ ರಾಷ್ಟ್ರಪತಿ ಭವನ ಮತ್ತು ರಾಷ್ಟ್ರಪತಿ ಭವನದ ಮ್ಯೂಸಿಯಂ ಸಂಕೀರ್ಣಕ್ಕೆ ಆಗಸ್ಟ್ 1 ರಿಂದ ಸಾರ್ವಜನಿಕರು ಭೇಟಿ ನೀಡಬಹುದಾಗಿದೆ ಎಂದು ಶುಕ್ರವಾರ ಅಧಿಕೃತ ಪ್ರಕಟಣೆಯೊಂದು ತಿಳಿಸಿದೆ.

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿಂದ ಏಪ್ರಿಲ್ ಮಧ್ಯಭಾಗದಿಂದ ಮುಚ್ಚಲ್ಪಟ್ಟಿರುವ ರಾಷ್ಟ್ರಪತಿ ಭವನ ಮತ್ತು ರಾಷ್ಟ್ರಪತಿ ಭವನದ ಮ್ಯೂಸಿಯಂ ಸಂಕೀರ್ಣಕ್ಕೆ ಆಗಸ್ಟ್ 1 ರಿಂದ ಸಾರ್ವಜನಿಕರು ಭೇಟಿ ನೀಡಬಹುದಾಗಿದೆ ಎಂದು ಶುಕ್ರವಾರ ಅಧಿಕೃತ ಪ್ರಕಟಣೆಯೊಂದು ತಿಳಿಸಿದೆ.
(ಗೆಜೆಟೆಡ್ ರಜೆದಿನಗಳನ್ನು ಹೊರತುಪಡಿಸಿ) ಶನಿವಾರ ಮತ್ತು ಭಾನುವಾರ, ಮೊದಲೇ ಕಾಯ್ದಿರಿಸಿದ ವೇಳೆಯಲ್ಲಿ ಗರಿಷ್ಟ 25 ಜನರಿಗೆ ಮೀರದಂತೆ ರಾಷ್ಟ್ರಪತಿ ಭವನಕ್ಕೆ ಜನರು ಭೇಟಿ ನೀಡಬಹುದಾಗಿದೆ. 10-30 ರಿಂದ 11-30, 12-30 ರಿಂದ 13-30 ಮತ್ತು 14-30 ರಿಂದ 15-30 ಅವಧಿಯಲ್ಲಿ ಮಾತ್ರ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಷ್ಟ್ರಪತಿ ಭವನದ ಮ್ಯೂಸಿಯಂ ಕಾಂಪ್ಲೆಕ್ಸ್ ವಾರದಲ್ಲಿ ಆರು ದಿನಗಳವರೆಗೂ ( ಮಂಗಳವಾರದಿಂದ ಭಾನುವಾರ) ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿರುತ್ತದೆ. ಮುಂಚಿತವಾಗಿ ಕಾಯ್ದಿರಿಸಿದ ವೇಳೆಯಲ್ಲಿ ಅಂದರೆ ಬೆಳಗ್ಗೆ 9-30ರಿಂದ 11 ಗಂಟೆ, 11-30 ರಿಂದ 13-00 ಗಂಟೆ, 13-30 ರಿಂದ 15-00 ಮತ್ತು 15-30 ರಿಂದ 17-00 ಗಂಟೆ ಅವಧಿಯಲ್ಲಿ ಗರಿಷ್ಠ 50 ಜನರು ಭೇಟಿ ನೀಡಬಹುದಾಗಿದೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


