ಮಹಾರಾಷ್ಟ್ರ ಪ್ರವಾಹ: ರಾಯ್‌ಗಡದಲ್ಲಿ ಮಳೆಯಿಂದಾಗಿ 47 ಮಂದಿ ಸಾವು, 53 ಮಂದಿ ನಾಪತ್ತೆ!
ಮಹಾರಾಷ್ಟ್ರದ ರಾಯ್ಗಡ್ ಜಿಲ್ಲೆಯಲ್ಲಿ ಶನಿವಾರ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ 47ಕ್ಕೆ ಏರಿಕೆಯಾಗಿದ್ದು ತಾಲಿಯೆ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 37 ಮಂದಿ ಮೃತಪಟ್ಟಿದ್ದಾರೆ.

ಮುಂಬೈ: ಮಹಾರಾಷ್ಟ್ರದ ರಾಯ್ಗಡ್ ಜಿಲ್ಲೆಯಲ್ಲಿ ಶನಿವಾರ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ 47ಕ್ಕೆ ಏರಿಕೆಯಾಗಿದ್ದು ತಾಲಿಯೆ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 37 ಮಂದಿ ಮೃತಪಟ್ಟಿದ್ದಾರೆ.
ತಾಲಿಯೆ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 37 ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಕಡೆ 10 ಮಂದಿ ಸೇರಿದಂತೆ ಕೊಂಕಣ ಪ್ರದೇಶದ ರಾಯ್ಗಡ್ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಒಟ್ಟು 47 ಜನರು ಸಾವನ್ನಪ್ಪಿದ್ದಾರೆ.
ಕೊಲ್ಹಾಪುರದಲ್ಲಿ ಐದು, ಮುಂಬೈ ಉಪನಗರದಲ್ಲಿ ನಾಲ್ಕು, ಸಿಂಧುದರ್ಗ್ನಲ್ಲಿ ಎರಡು ಮತ್ತು ಪುಣೆಯಲ್ಲಿ ಒಂದು ಸಾವು ಸಂಭವಿಸಿದೆ ಎಂದು ವರದಿ ತಿಳಿಸಿದೆ.
ಇನ್ನೂ ಮಹಾರಾಷ್ಟ್ರದಲ್ಲಿ ಒಟ್ಟಾರೆ 138 ಮಂದಿ ಮೃತಪಟ್ಟಿದ್ದು 59 ಜನರು ಕಾಣೆಯಾಗಿದ್ದಾರೆ. ಅದರಲ್ಲಿ 53 ಮಂದಿ ರಾಯಗಡ್, ನಾಲ್ವರು ಸತಾರಾ ಮತ್ತು ಇಬ್ಬರು ಥಾಣೆ ಮೂಲದವರಾಗಿದ್ದಾರೆ. ಭಾರೀ ಮಳೆಯಿಂದಾಗಿ ಇದುವರೆಗೆ 89 ಜನರಿಗೆ ಗಾಯಗಳಾಗಿವೆ.
ಕೊಲ್ಹಾಪುರ ಜಿಲ್ಲೆಯಲ್ಲೇ ಭಾರೀ ಮಳೆ ಹಾಗೂ ಪ್ರವಾಹದ ಮುನ್ನೆಚ್ಚರಿಕೆಯಾಗಿ 40,882 ಸೇರಿದಂತೆ ಇದುವರೆಗೆ 89,333 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಇಲಾಖೆ ವರದಿಯಲ್ಲಿ ತಿಳಿಸಿದೆ.
ವಿವಿಧ ಸರ್ಕಾರಿ ಸಂಸ್ಥೆಗಳ 21 ತಂಡಗಳು ಮತ್ತು 59 ದೋಣಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


