ದೆಹಲಿಯಲ್ಲಿ ಸೋಮವಾರದಿಂದ ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಸಿನಿಮಾ ಥಿಯೇಟರ್ ಓಪನ್
ಏಪ್ರಿಲ್ ಮತ್ತು ಮೇ ನಲ್ಲಿ ಕೋವಿಡ್-19 ಸಾಂಕ್ರಾಮಿಕದ ಎರಡನೇ ಹಂತದ ವೇಳೆಯಲ್ಲಿ ಅಭೂತಪೂರ್ವ ರೀತಿಯಲ್ಲಿ ಸೋಂಕು ಹೆಚ್ಚಳಕ್ಕೆ ಸಾಕ್ಷಿಯಾಗಿದ್ದ ದೆಹಲಿಯಲ್ಲಿ ಕಳೆದ ಕೆಲವು ವಾರಗಳಿಂದ ಪರಿಸ್ಥಿತಿ ಸುಧಾರಣೆಯಾಗಿದ್ದು, ಹಂತ ಹಂತವಾಗಿ ಸರ್ಕಾರ ನಗರದಲ್ಲಿ ಪುನರಾರಂಭ ಮಾಡುತ್ತಿದೆ.

ನವದೆಹಲಿ: ಏಪ್ರಿಲ್ ಮತ್ತು ಮೇ ನಲ್ಲಿ ಕೋವಿಡ್-19 ಸಾಂಕ್ರಾಮಿಕದ ಎರಡನೇ ಹಂತದ ವೇಳೆಯಲ್ಲಿ ಅಭೂತಪೂರ್ವ ರೀತಿಯಲ್ಲಿ ಸೋಂಕು ಹೆಚ್ಚಳಕ್ಕೆ ಸಾಕ್ಷಿಯಾಗಿದ್ದ ದೆಹಲಿಯಲ್ಲಿ ಕಳೆದ ಕೆಲವು ವಾರಗಳಿಂದ ಪರಿಸ್ಥಿತಿ ಸುಧಾರಣೆಯಾಗಿದ್ದು, ಹಂತ ಹಂತವಾಗಿ ಸರ್ಕಾರ ನಗರದಲ್ಲಿ ಪುನರಾರಂಭ ಮಾಡುತ್ತಿದೆ.
ಡಿಡಿಎಂಎ ನೂತನ ಅನ್ ಲಾಕ್ ಮಾರ್ಗಸೂಚಿಯಂತೆ, ದೆಹಲಿ ನಗರ ಜೀವನಾಡಿಯಾಗಿರುವ ಮೆಟ್ರೋ ರೈಲು ಸೋಮವಾರದಿಂದ ಶೇ.100 ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಆದರೆ, ಪ್ರಯಾಣಿಕರು ನಿಂತು ಪ್ರಯಾಣಿಸಲು ಅವಕಾಶವಿಲ್ಲ.
ಸಿನಿಮಾ ಹಾಲ್ ಗಳು, ಥಿಯೇಟರ್ ಗಳು ಮತ್ತು ಮಲ್ಟಿಪ್ಲಿಕ್ಸ್ ಗಳು ಜುಲೈ 26 ರಿಂದ ಶೇಕಡಾ 50 ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಬಿ2ಬಿ ಪ್ರದರ್ಶನಕೂ ಅವಕಾಶ ನೀಡಲಾಗಿದೆ. ಆದರೆ, ಕೇವಲ ವಾಣಿಜ್ಯ ಸಂದರ್ಶಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಮದುವೆ ಹಾಗೂ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು 100 ಜನರಿಗೆ ಅವಕಾಶ ಮಾಡಿಕೊಡಲಾಗಿದೆ. ಸ್ಪಾಗಳು ಕೂಡಾ ತೆರಯಬಹುದು ಆದರೆ, ಎಲ್ಲಾ ಸಿಬ್ಬಂದಿಗಳು ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿರಬೇಕು ಅಥವಾ ಆರ್ ಟಿ- ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಡಿಡಿಎಂಎ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


