ದೇಶ

ಸಿಂಗು ಗಡಿಯ ರೈತರ ಪ್ರತಿಭಟನಾ ಸ್ಥಳದಲ್ಲಿ ಅಗ್ನಿ ಅವಘಡ, ಟೆಂಟ್ ಗೆ ಹಾನಿ

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯ ಸಿಂಗು ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಟೆಂಟ್ ಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಂಗು ಗಡಿಯ ರೈತರ ಪ್ರತಿಭಟನಾ ಸ್ಥಳದಲ್ಲಿ ಅಗ್ನಿ ಅವಘಡ, ಟೆಂಟ್ ಗೆ ಹಾನಿ
ಸಾಂದರ್ಭಿಕ ಚಿತ್ರ
Published On :

ಸೋನಿಪತ್: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯ ಸಿಂಗು ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಟೆಂಟ್ ಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸುವ ಹೊಸ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ರೈತರು ಕಳೆದ ನವೆಂಬರ್‌ನಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೃಷಿ ಕಾನೂನುಗಳು ರೈತ ಪರವಾಗಿವೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ. ಈ ಸಂಬಂಧ 

ರೈತರು ಮತ್ತು ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ರೈತರ ಮನವೊಲಿಸುವಲ್ಲಿ ಸರ್ಕಾರ ವಿಫಲವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.