ಸಂಸತ್ತಿನಲ್ಲಿ ಗದ್ದಲ: ಅಸಹಾಯಕರಾಗುತ್ತಿದ್ದೇವೆ ಎಂದ ವೆಂಕಯ್ಯ ನಾಯ್ಡು; ರಾಜ್ಯಸಭೆ, ಲೋಕಸಭೆ ಕಲಾಪ ಮುಂದೂಡಿಕೆ
ಪೆಗಾಸಸ್, ನೂತನ ಕೃಷಿ ಕಾಯ್ದೆ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ವಿಪಕ್ಷಗಳ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ತೀವ್ರ ಅಸಮಾಧಾನಗೊಂಡಿದ್ದು, ನಾವು ಅಸಹಾಯಕರಾಗುತ್ತಿದ್ದೇವೆ ಎಂದು ಹೇಳಿದ್ದಾರೆ.

ನವದೆಹಲಿ: ಪೆಗಾಸಸ್, ನೂತನ ಕೃಷಿ ಕಾಯ್ದೆ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ವಿಪಕ್ಷಗಳ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ತೀವ್ರ ಅಸಮಾಧಾನಗೊಂಡಿದ್ದು, ನಾವು ಅಸಹಾಯಕರಾಗುತ್ತಿದ್ದೇವೆ ಎಂದು ಹೇಳಿದ್ದಾರೆ.
ಸಂಸತ್ತಿನ ಉಭಯ ಸದನಗಳಲ್ಲಿ ವಿರೋಧ ಪಕ್ಷಗಳ ಸದಸ್ಯರು ಪೆಗಾಸಸ್, ನೂತನ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ಗದ್ದಲ ಉಂಟಾದ ಪರಿಣಾಮ ಕಲಾಪವನ್ನು ಮಧ್ಯಾಹ್ನ 2 ಗಂಟೆವರೆಗೆ ಮಂದೂಡಲಾಗಿದೆ.
ರಾಜ್ಯಸಭೆಯಲ್ಲಿ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಇತರ ಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಪ್ರತಿಭಟಿಸಿದರೆ, ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರು ಸ್ಪೀಕರ್ ಪೀಠದ ಮುಂಭಾಗಕ್ಕೆ ತೆರಳಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇದಕ್ಕೂ ಮೊದಲು 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಗೌರವ ನಮನ ಸಲ್ಲಿಸಲಾಯಿತು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು ಅವರನ್ನು ಅಭಿನಂದಿಸಲಾಯಿತು.
ಅಸಹಾಯಕರಾಗುತ್ತಿದ್ದೇವೆ ಎಂದ ವೆಂಕಯ್ಯ ನಾಯ್ಡು
ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನ 2ಕ್ಕೆ ಮುಂದೂಡಿದ ಸಭಾಧ್ಯಕ್ಷ ಎಂ.ವೆಂಕಯ್ಯನಾಯ್ಡು, ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಚರ್ಚಿಸದಂತೆ ಸದಸ್ಯರನ್ನು ತಡೆಯಲಾಗಿದೆ. ದಿನದಿಂದ ದಿನಕ್ಕೆ ನಾವು ಅಸಹಾಯಕರಾಗುತ್ತಿದ್ದೇವೆ’ ಎಂದರು. ಲೋಕಸಭೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಕಲಾಪ ನಡೆದಿದ್ದು, ಪ್ರಶ್ನೋತ್ತರ ಅವಧಿಯಲ್ಲಿ ಕೆಲವೊಂದು ಪ್ರಶ್ನೆಗಳಿಗೆ ಉತ್ತರಿಸಲಾಯಿತು. ಬಳಿಕ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 2ಕ್ಕೆ ಮುಂದೂಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


