ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ಕರೆನ್ಸಿ ನೋಟುಗಳ ಮುದ್ರಣದ ಯೋಜನೆ ಇಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೋವಿಡ್-19 ಸಾಂಕ್ರಾಮಿಕದಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಹೊರಬರಲು ಕರೆನ್ಸಿ ನೋಟುಗಳ ಮುದ್ರಣ ಯೋಜನೆ ಪ್ರಸ್ತಾವನೆ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಗೆ ತಿಳಿಸಿದ್ದಾರೆ.

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಹೊರಬರಲು ಕರೆನ್ಸಿ ನೋಟುಗಳ ಮುದ್ರಣ ಯೋಜನೆ ಪ್ರಸ್ತಾವನೆ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಗೆ ತಿಳಿಸಿದ್ದಾರೆ.
ಕರೆನ್ಸಿ ನೋಟು ಮುದ್ರಣದ ಕುರಿತ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್ ಉತ್ತರಿಸುತ್ತಿದ್ದರು. ಕೋವಿಡ್-19 ನಿಂದ ಉಂಟಾಗಿರುವ ಉದ್ಯೋಗ ನಷ್ಟವನ್ನು ತಪ್ಪಿಸಲು ಹಾಗೂ ಆರ್ಥಿಕತೆಗೆ ಚೇತರಿಕೆ ನೀಡಲು ಕರೆನ್ಸಿ ನೋಟುಗಳ ಮುದ್ರಣದ ಆಯ್ಕೆಯನ್ನು ಪರಿಗಣಿಸುವಂತೆ ಹಲವು ಅರ್ಥಶಾಸ್ತ್ರಜ್ಞರು ಮತ್ತು ತಜ್ಞರು ಸಲಹೆ ನೀಡಿದ್ದರು.
ಭಾರತದ ರಿಯಲ್ ಜಿಡಿಪಿ 2020-21 ರ ಅವಧಿಯಲ್ಲಿ ಶೇ.7.3 ರಷ್ಟು ಕುಸಿತ ಕಂಡಿರುವ ಅಂದಾಜಿದೆ ಎಂದು ಲೋಕಸಭೆಗೆ ವಿತ್ತ ಸಚಿವರು ಲಿಖಿತ ಉತ್ತರ ನೀಡಿದ್ದಾರೆ. ಈ ಕುಸಿತ ಸಾಂಕ್ರಾಮಿಕದ ಪರಿಣಾಮ ಹಾಗೂ ಸಾಂಕ್ರಾಮಿಕವನ್ನು ತಡೆಗಟ್ಟುವುದಕ್ಕೆ ಕೈಗೊಂಡ ಕ್ರಮಗಳನ್ನು ಸೂಚಿಸುತ್ತವೆ ಎಂದೂ ಸಚಿವರು ಹೇಳಿದ್ದಾರೆ.
"ಆದರೆ ಭಾರತದ ಆರ್ಥಿಕತೆಯ ಮೂಲಭೂತ ಅಂಶಗಳು ಬಲಿಷ್ಠವಾಗಿದೆ. ಆತ್ಮ ನಿರ್ಭರ ಭಾರತ ಮಿಷನ್ 2020-21 ರ ಉತ್ತರಾರ್ಧದಲ್ಲಿ ಆರ್ಥಿಕತೆಯನ್ನು ಚೇತರಿಕೆಯ ಹಾದಿಯಲ್ಲಿಟ್ಟಿದೆ." ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಸಾಂಕ್ರಾಮಿಕದ ಪರಿಣಾಮವನ್ನು ತಡೆಗಟ್ಟಲು, 2020-21 ರ ಅವಧಿಯಲ್ಲಿ ಆರ್ಥಿಕ ಬೆಳವಣಿಗೆಗೆ ಪುನರುಜ್ಜೀವನ ನೀಡುವುದಕ್ಕಾಗಿ ಹಾಗೂ ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ಸರ್ಕಾರ 29.87 ಲಕ್ಷ ಕೋಟಿಯ ಸಮಗ್ರ ಪ್ಯಾಕೇಜ್ ನ್ನು ಘೋಷಿಸಿತ್ತು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


