ದೇಶ

ದೇಶದಲ್ಲಿ ಈವರೆಗೂ ಸುಮಾರು 44 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ- ಕೇಂದ್ರ ಆರೋಗ್ಯ ಸಚಿವಾಲಯ

ದೇಶದಲ್ಲಿ ನೀಡಲಾಗುವ ಸಂಚಿತ ಕೋವಿಡ್-19 ಲಸಿಕೆ ಪ್ರಮಾಣವು 44 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ದೇಶದಲ್ಲಿ ಈವರೆಗೂ ಸುಮಾರು 44 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ- ಕೇಂದ್ರ ಆರೋಗ್ಯ ಸಚಿವಾಲಯ
ಕೋವಿಶೀಲ್ಡ್ ಲಸಿಕೆ ನೀಡಲು ತಯಾರಾಗುತ್ತಿರುವ ಆರೋಗ್ಯ ಕಾರ್ಯಕರ್ತೆ
Published On :

ನವದೆಹಲಿ: ದೇಶದಲ್ಲಿ ನೀಡಲಾಗುವ ಸಂಚಿತ ಕೋವಿಡ್-19 ಲಸಿಕೆ ಪ್ರಮಾಣವು 44 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಮತ್ತೊಂದು ಗಮನಾರ್ಹ ಸಾಧನೆಯಲ್ಲಿ 1 ಕೋಟಿ ಗೂ ಹೆಚ್ಚು ಜನರಿಗೆ ಎರಡು ಡೋಸ್ ಕೋವಿಡ್ ಲಸಿಕೆ ನೀಡುವಿಕೆಯಲ್ಲಿ ಮಹಾರಾಷ್ಟ್ರ ಮೊದಲ ರಾಜ್ಯವಾಗಿ ಹೊರಹೊಮ್ಮಿದೆ. ಸಂಜೆ ಏಳರ ತಾತ್ಕಾಲಿಕ ವರದಿಯ ಪ್ರಕಾರ, ಸೋಮವಾರದವರೆಗೂ 57,48,692 ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

18-44 ವಯಸ್ಸಿನ 7,20,900 ಫಲಾನುಭವಿಗಳು ಮೊದಲ ಡೋಸ್ ಗಳನ್ನು ಪಡೆದಿದ್ದಾರೆ. 3,49,496 ಮಂದಿ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಮೂರನೇ ಹಂತದ ಲಸಿಕಾ ಅಭಿಯಾನ ಆರಂಭವಾದಾಗಿನಿಂದಲೂ  ದೇಶಾದ್ಯಂತ 18-44 ವರ್ಷದೊಳಗಿನ ಒಟ್ಟಾರೇ 14,19,55,995 ಮಂದಿ ಮೊದಲ ಡೋಸ್ ಪಡೆದಿದ್ದರೆ, 65,72,678 ಮಂದಿ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.

ಗುಜರಾತ್ , ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ 18ರಿಂದ 44 ವರ್ಷದೊಳಗೆ 1 ಕೋಟಿ ಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.  ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ  ಮತ್ತು ಪಶ್ಚಿಮ ಬಂಗಾಳದಲ್ಲಿ 18ರಿಂದ 44 ವರ್ಷದೊಳಗಿನ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.