ದೇಶ

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ; ಕನಿಷ್ಠ 4 ಮಂದಿ ಸಾವು, 40 ಮಂದಿ ನಾಪತ್ತೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ; ಕನಿಷ್ಠ 4 ಮಂದಿ ಸಾವು, 40 ಮಂದಿ ನಾಪತ್ತೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ
Published On :

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ ವಾರ್ ಜಿಲ್ಲೆಯ ಡಚ್ಚನ್ ಟೆಹ್ಸೀಲ್ ಪ್ರಾಂತ್ಯದ ಹೊಂಝಾರ್ ಎಂಬ ಕುಗ್ರಾಮದಲ್ಲಿ ಮೇಘಸ್ಪೋಟ ಸಂಭವಿಸಿದ್ದು, ಪ್ರವಾಹದಲ್ಲಿ ಸಾಕಷ್ಟು ಮನೆಗಳು ಕೊಚ್ಚಿಹೋಗಿವೆ ಎಂದು ತಿಳಿದುಬಂದಿದೆ. ವಿಚಾರ ತಿಳಿಯುತ್ತಿದ್ದಂತೆಯೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (NDRF)  ಸಿಬ್ಬಂದಿಗಳು ಗ್ರಾಮಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ವೇಳೆ 4 ಮೃತದೇಹಳು ಪತ್ತೆಯಾಗಿದ್ದು, ಇನ್ನೂ 40ಕ್ಕೂ ಹೆಚ್ಚು ಗ್ರಾಮಸ್ಥರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ನಾಪತ್ತೆಯಾಗಿರುವವರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಸಮುತ್ತಮುತ್ತಲಿನ ಗ್ರಾಮಗಳಲ್ಲಿ ಮತ್ತು ಇಳಿಜಾರು ಪ್ರದೇಶಗಳಲ್ಲಿ ಎನ್ ಡಿಆರ್ ಎಫ್ ಸಿಬ್ಬಂದಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. 

ಕಳೆದೊಂದು ವಾರದಿಂದ ಜಮ್ಮುವಿನ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರಗಳ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರಮುಖವಾಗಿ ನದಿ ಪಾತ್ರದ ಗ್ರಾಮಗಳು ಮತ್ತು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಅಪಾಯದಲ್ಲಿದ್ದು  ಅವರನ್ನು ತುರ್ತಾಗಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇನ್ನು ಜಮ್ಮು ಮತ್ತು ಕಾಶ್ಮೀರದ ಉಸ್ತುವಾರಿ ಮತ್ತು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಕಣಿವೆ ರಾಜ್ಯಕ್ಕೆ ಅಗತ್ಯವಾದ ಎಲ್ಲ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ. ಅಲ್ಲದೆ ಅಗತ್ಯಬಿದ್ದರೆ ಸೇನಾ ಹೆಲಿಕಾಪ್ಟರ್ ಗಳನ್ನೂ ಕೂಡ ಕಾರ್ಯಾಚರಣೆಗೆ ಇಳಿಸಲಾಗುತ್ತದೆ. ಈ ಕುರಿತಂತೆ ಡಿಎಂ ಅಶೋಕ್ ಶರ್ಮಾ ಅವರೊಂದಿಗೆ ತಾವು ಮಾತನಾಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.