ಬಿಹಾರ ವಿಧಾಸಭೆಯಲ್ಲಿ ರಾಜ್ಯದ ಮೊದಲ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವ ಮಸೂದೆ ಅಂಗೀಕಾರ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತಮ್ಮ ತವರು ಜಿಲ್ಲೆ ನಳಂದದಲ್ಲಿ ರಾಜ್ಯದ ಮೊಟ್ಟಮೊದಲ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಸಜ್ಜಾಗಿದ್ದಾರೆ.

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತಮ್ಮ ತವರು ಜಿಲ್ಲೆ ನಳಂದದಲ್ಲಿ ರಾಜ್ಯದ ಮೊಟ್ಟಮೊದಲ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಸಜ್ಜಾಗಿದ್ದಾರೆ.
ಸುಮಾರು 150 ಎಕರೆಗೂ ಹೆಚ್ಚು ಜಾಗದಲ್ಲಿ ದೇಶದ 8ನೇ ಕ್ರೀಡಾ ವಿಶ್ವವಿದ್ಯಾಲಯವನ್ನು ಬಿಹಾರದಲ್ಲಿ ಸ್ಥಾಪಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಮೂಲಕ ಕ್ರೀಡಾ ಆಕಾಂಕ್ಷಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಅನ್ವೇಷಿಸಲು ಬಿಹಾರ ಸರ್ಕಾರ ಮುಂದಾಗಿದೆ.
ಬಿಹಾರ ವಿಧಾನಸಭೆಯಲ್ಲಿ ಮಂಗಳವಾರ ಬಿಹಾರ ಕ್ರೀಡಾ ವಿಶ್ವವಿದ್ಯಾಲಯದ ಮಸೂದೆ 2021 ಅನ್ನು ಅಂಗೀಕರಿಸಲಾಗಿದ್ದು, ಕಲೆ, ಸಂಸ್ಕೃತಿ ಮತ್ತು ಯುವಜನ ಇಲಾಖೆಯ ಕಾರ್ಯದರ್ಶಿ ಬಂದನಾ ಪ್ರೇಯಾಶಿ ಸೇರಿದಂತೆ ಹಲವು ಅಧಿಕಾರಿಗಳ ತಂಡ ಈ ಮಸೂದೆಯನ್ನು ಸಿದ್ಧಪಡಿಸಿದೆ.
ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಬಂದನಾ ಅವರು,"ಕ್ರೀಡಾ ವಿಶ್ವವಿದ್ಯಾಲಯವನ್ನು ರಾಜ್‌ಗೀರ್‌ನಲ್ಲಿ ಸ್ಥಾಪಿಸಲಾಗುವುದು. ಇದು ಕ್ರೀಡಾ ಅಕಾಡೆಮಿಯನ್ನೂ ಒಳಗೊಂಡಿರುತ್ತದೆ" ಎಂದು ಹೇಳಿದ್ದಾರೆ.
ಇದಲ್ಲದೆ ಬಿಹಾರ ವಿಧಾನಸಭೆಯಲ್ಲಿ ಬಿಹಾರ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಸೂದೆಯನ್ನು ಅಂಗೀಕರಿಸಲಾಗಿದ್ದು.
ಈ ಎರಡೂ ವಿಶ್ವವಿದ್ಯಾಲಯಗಳಲ್ಲಿ, ಒಟ್ಟು ಮೂರನೇ ಒಂದು ಭಾಗದಷ್ಟು ಸೀಟುಗಳನ್ನು ಮಹಿಳೆಯರು ಮತ್ತು ಬಾಲಕಿಯರಿಗೆ ಮೀಸಲಿಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


