ದೇಶ

ಪೆಗಾಸಸ್ ಪ್ರಕರಣದ ವಿರುದ್ಧ ಲೋಕಸಭೆಯಲ್ಲಿ ಪ್ರತಿಭಟನೆ: ಸಭಾಧ್ಯಕ್ಷರ ಎದುರು ಕಾಗದ ತೂರಿದ ಕಾಂಗ್ರೆಸ್ ಸಂಸದರು 

ಪೆಗಾಸಸ್ ಹಾಗೂ ಇನ್ನಿತರ ಪ್ರಕರಣಗಳ ವಿರುದ್ಧ ಸಂಸತ್ ನಲ್ಲಿ ಕಾಂಗ್ರೆಸ್ ಸದಸ್ಯರ ಪ್ರತಿಭಟನೆಯಿಂದ ಲೋಕಸಭೆಯಲ್ಲಿ ಗದ್ದಲ ಉಂಟಾಗಿ ಕಲಾಪವನ್ನು ಕೆಲಕಾಲ ಮುಂದೂಡಲಾಗಿತ್ತು.

ಪೆಗಾಸಸ್ ಪ್ರಕರಣದ ವಿರುದ್ಧ ಲೋಕಸಭೆಯಲ್ಲಿ ಪ್ರತಿಭಟನೆ: ಸಭಾಧ್ಯಕ್ಷರ ಎದುರು ಕಾಗದ ತೂರಿದ ಕಾಂಗ್ರೆಸ್ ಸಂಸದರು 
ಸದಸ್ಯರ ಪ್ರತಿಭಟನೆ (ಸಂಗ್ರಹ ಚಿತ್ರ)
Published On :

ನವದೆಹಲಿ: ಪೆಗಾಸಸ್ ಹಾಗೂ ಇನ್ನಿತರ ಪ್ರಕರಣಗಳ ವಿರುದ್ಧ ಸಂಸತ್ ನಲ್ಲಿ ಕಾಂಗ್ರೆಸ್ ಸದಸ್ಯರ ಪ್ರತಿಭಟನೆಯಿಂದ ಲೋಕಸಭೆಯಲ್ಲಿ ಗದ್ದಲ ಉಂಟಾಗಿ ಕಲಾಪವನ್ನು ಕೆಲಕಾಲ ಮುಂದೂಡಲಾಗಿತ್ತು. 

ಕಾಂಗ್ರೆಸ್ ನ ಸದಸ್ಯರು ಸಭಾಧ್ಯಕ್ಷರು ಹಾಗೂ ಖಜಾನೆ ಬೆಂಚುಗಳತ್ತ ಕಾಗದಗಳನ್ನು ತೂರಿ ಪ್ರತಿಭಟನೆ ನಡೆಸಿದ್ದರು. ಬೆಳಿಗ್ಗೆ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ವಿಪಕ್ಷ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆ ತೀವ್ರಗೊಂಡಾಗ ಕಾಂಗ್ರೆಸ್ ಸದಸ್ಯರು ಕಾಗದ ಪತ್ರಗಳನ್ನು ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪ್ರತಿಭಟನೆ ನಡೆದಾಗ ಕಲಾಪವನ್ನು ಮುನ್ನಡೆಸುತ್ತಿದ್ದ ರಾಜೇಂದ್ರ ಅಗರ್ವಾಲ್ ನಿಯಮ 377 ಅಡಿಯಲ್ಲಿ ವಿಷಯವನ್ನು ಕೈಗೆತ್ತಿಕೊಂಡಿದ್ದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ 20 ನಿಮಿಷಗಳ ಕಾಲ ಕಲಾಪವನ್ನು ಮುಂದೂಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.