ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 2.18 ಕೋಟಿ ಡೋಸ್ ಕೋವಿಡ್ ಲಸಿಕೆ ಇದೆ: ಕೇಂದ್ರ ಸರ್ಕಾರ
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ 2.18 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ನವದೆಹಲಿ: ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ 2.18 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಈವರೆಗೆ ಕೇಂದ್ರವು ರಾಜ್ಯಗಳಿಗೆ 46,23,27,530 ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 2,18,95,780 ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.
ಕೇಂದ್ರದ ಮಾಹಿತಿಯ ಪ್ರಕಾರ, ತ್ಯಾಜ್ಯ ಸೇರಿದಂತೆ ಒಟ್ಟು 44,29,95,780 ಪ್ರಮಾಣದಷ್ಟು ಲಸಿಕೆಗಳು ಬಳಕೆಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ 1,20,70,820 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ಭಾರತದಲ್ಲಿ ಜನವರಿ 16ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


