ದೇಶ

ಭಾರತದ ಕೋವಿಡ್-19 ಲಸಿಕೆ ಕಾರ್ಯಕ್ರಮಕ್ಕೆ ಅಮೆರಿಕ 25 ಮಿಲಿಯನ್ ಡಾಲರ್ ಆರ್ಥಿಕ ನೆರವು ಘೋಷಣೆ!

ಭಾರತದ ಕೋವಿಡ್-19 ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ 25 ಮಿಲಿಯನ್ ಡಾಲರ್ ಆರ್ಥಿಕ ನೆರವು ಒದಗಿಸುವುದಾಗಿ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕನ್ ಪ್ರಕಟಿಸಿದ್ದಾರೆ.

ಭಾರತದ ಕೋವಿಡ್-19 ಲಸಿಕೆ ಕಾರ್ಯಕ್ರಮಕ್ಕೆ ಅಮೆರಿಕ 25 ಮಿಲಿಯನ್ ಡಾಲರ್ ಆರ್ಥಿಕ ನೆರವು ಘೋಷಣೆ!
ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕನ್ ಮತ್ತು ಪ್ರಧಾನಿ ನರೇಂದ್ರ ಮೋದಿ(ಸಂಗ್ರಹ ಚಿತ್ರ)
Published On :

ನವದೆಹಲಿ: ಭಾರತದ ಕೋವಿಡ್-19 ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ 25 ಮಿಲಿಯನ್ ಡಾಲರ್ ಆರ್ಥಿಕ ನೆರವು ಒದಗಿಸುವುದಾಗಿ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕನ್ ಪ್ರಕಟಿಸಿದ್ದಾರೆ.

ನಿನ್ನೆಯಿಂದ ಭಾರತ ಪ್ರವಾಸ ಕೈಗೊಂಡಿರುವ ಅವರು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಉಭಯ ದೇಶಗಳ ನಾಯಕರು ಹಲವು ಮಾತುಗಳನ್ನು ನಡೆಸಿದ್ದು ಕೋವಿಡ್ ಸಾಂಕ್ರಾಮಿಕ ಮತ್ತು ಅದರಿಂದಾಗಿರುವ ನಕಾರಾತ್ಮಕ ಪರಿಣಾಮಗಳನ್ನು ನಿರ್ವಹಿಸುವ ಕುರಿತು ಮತ್ತಷ್ಟು ಸಹಕಾರಕ್ಕೆ ಉತ್ತೇಜನ ನೀಡುವ ಸಂಬಂಧ ಚರ್ಚೆ, ಮಾತುಕತೆ ನಡೆಸಿದ್ದಾರೆ.

ಬ್ಲಿಂಕನ್ ಅವರ ಜೊತೆಗೆ ಸವಿಸ್ತಾರವಾಗಿ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಅಮೆರಿಕ ಭಾರತಕ್ಕೆ ತೋರಿದ ವಿಶೇಷ ನೆರವನ್ನು ಪ್ರಸ್ತಾಪಿಸಿ ಧನ್ಯವಾದ ಹೇಳಿದರು. ಭಾರತದಲ್ಲಿ ಲಸಿಕೆ ಉತ್ಪಾದನೆಗೆ ಅಮೆರಿಕ ನೀಡುತ್ತಿರುವ ಕಚ್ಚಾ ಸಾಮಗ್ರಿಗಳ ಪೂರೈಕೆ ಮಾಡಿದ ಅಮೆರಿಕಕ್ಕೆ ವಿದೇಶಾಂಗ ಸಚಿವರು ಧನ್ಯವಾದ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.