ಕೋವಿಡ್ ರೋಗಿಗಳಲ್ಲಿ ಕೂದಲು ಉದುರುವಿಕೆ ಸಮಸ್ಯೆ
ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ಕೊರೋನಾವೈರಸ್ ರೋಗಿಗಳಲ್ಲಿ ಕೂದಲು ಉದುರುವಿಕೆ ಸಮಸ್ಯೆಗಳಲ್ಲಿ ಶೇ. 100 ರಷ್ಟು ಏರಿಕೆ ಕಂಡುಬಂದಿದೆ ಎಂದು ವೈದ್ಯರು ಗುರುವಾರ ತಿಳಿಸಿದ್ದಾರೆ.

ನವದೆಹಲಿ: ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ಕೊರೋನಾವೈರಸ್ ರೋಗಿಗಳಲ್ಲಿ ಕೂದಲು ಉದುರುವಿಕೆ ಸಮಸ್ಯೆಗಳಲ್ಲಿ ಶೇ. 100 ರಷ್ಟು ಏರಿಕೆ ಕಂಡುಬಂದಿದೆ ಎಂದು ವೈದ್ಯರು ಗುರುವಾರ ತಿಳಿಸಿದ್ದಾರೆ. ವಕ್ತಾರರ ಪ್ರಕಾರ, ಸಾಮಾನ್ಯವಾಗಿ ದಕ್ಷಿಣ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ವಾರದಲ್ಲಿ ನಾಲ್ಕರಿಂದ ಐದು ಕೂದಲು ಉದುರುವಿಕೆ ಸಮಸ್ಯೆ ದಾಖಲಾಗಿದೆ.
ಆದಾಗ್ಯೂ, ಕೂದಲು ಉದುರುವಿಕೆ ಪ್ರಕರಣಗಳು ಮೇ ಮಧ್ಯ ಭಾಗದಿಂದ ಹೆಚ್ಚಾಗುವುದು ಆರಂಭವಾಗಿದೆ.ತದನಂತರ ಈ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿದೆ ಎಂದು ವಕ್ತಾರರು ಹೇಳಿದ್ದಾರೆ. ಸಾಮಾನ್ಯವಾಗಿ ಕಾಯಿಲೆಯಿಂದ ಚೇತರಿಸಿಕೊಂಡ ತಿಂಗಳ ಬಳಿಕ ಕೋವಿಡ್-19 ರೋಗಿಗಳಲ್ಲಿ ಕೂದಲು ಉದುರುವಿಕೆ ಅನುಭವವಾಗಿದೆ. ಕೆಲ ಪ್ರಕರಣಗಳಲ್ಲಿ ಸೋಂಕಿನ ಅವಧಿಯಲ್ಲೂ ಸಹ ಕೂದಲು ಉದರುವಿಕೆ ಕಂಡುಬಂದಿದೆ ಎಂದು ವೈದ್ಯರು ಹೇಳಿದ್ದಾರೆ.
ಆಹಾರ ಪದ್ಧತಿಯಲ್ಲಿನ ಬದಲಾವಣೆ, ಸೋಂಕಿನ ಸಮಯದಲ್ಲಿ ಜ್ವರ, ಒತ್ತಡ, ಆತಂಕ, ಹಠಾತ್ ಹಾರ್ಮೋನುಗಳ ಬದಲಾವಣೆಗಳು ಮತ್ತು ಕೋವಿಡ್ ನಂತರದ ಉರಿಯೂತದ ಪ್ರತಿಕ್ರಿಯೆಗಳು ತಾತ್ಕಾಲಿಕ ಕೂದಲು ಉದುರುವಿಕೆಗೆ ಕಾರಣಗಳಾಗಿವೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


