ಎಎಪಿ ಶಾಸಕ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಧಾನಸಭೆಯಿಂದ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ಅಮಾನತು
ಮುಂಗಾರು ಅಧಿವೇಶನದ ಮೊದಲ ದಿನದಂದು ಎಎಪಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ರನ್ನು ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಸದನದಿಂದ ಅಮಾನತುಗೊಳಿಸಿದ್ದಾರೆ.

ನವದೆಹಲಿ: ಮುಂಗಾರು ಅಧಿವೇಶನದ ಮೊದಲ ದಿನದಂದು ಎಎಪಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ರನ್ನು ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಸದನದಿಂದ ಅಮಾನತುಗೊಳಿಸಿದ್ದಾರೆ.
ಸ್ಪೀಕರ್ ನೀಡಿದ ನಿರ್ದೇಶನಗಳನ್ನು ಧಿಕ್ಕರಿಸಿ, ಸದನದ ಕಾರ್ಯಚಟುವಟಿಕೆಗೆ ಅವಕಾಶ ನೀಡದ ಕಾರಣಕ್ಕಾಗಿ ಮಾರ್ಷಲ್ ರಿಂದ ಬಿಜೆಪಿ ಶಾಸಕರಾದ ವಿಜೇಂದರ್ ಗುಪ್ತಾ ಮತ್ತು ಅನಿಲ್ ಬಾಜ್ಪೈ ಹೊರಗೆ ಕಳುಹಿಸಲಾಯಿತು. ಕೇಂದ್ರವು ತಮ್ಮ ಅಧಿಕಾರಗಳ ಕಸಿದುಕೊಳ್ಳುತ್ತಿದೆ ಎಂದು ಗೋಯೆಲ್ ತಮ್ಮ ದುಃಖ ಮತ್ತು ಆಳವಾದ ನೋವವನ್ನು ವ್ಯಕ್ತಪಡಿಸಿದರು.
ತಮಗೆ ಮಾತನಾಡಲು ಹೆಚ್ಚು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಶಾಸಕರು ಗದ್ದಲ ಎಬ್ಬಿಸಿದ್ದರು. ಸದನದ ನಿಯಮಗಳ ಪ್ರಕಾರ ಪ್ರತಿಪಕ್ಷದ ಶಾಸಕರು 20 ನಿಮಿಷಗಳಿಗಿಂತ ಒಂದು ಸೆಕೆಂಡ್ ಹೆಚ್ಚುವರಿ ಮಾತನಾಡಲು ನಾನು ಅನುಮತಿಸುವುದಿಲ್ಲ ಎಂದು ಗೋಯೆಲ್ ಹೇಳಿದರು.
ವಿಧಾನಸಭೆಯ ಮುಂಗಾರು ಅಧಿವೇಶನದ ಮೊದಲ ದಿನದ ಪ್ರಕ್ರಿಯೆಗಳು ಪ್ರಾರಂಭವಾದ ತಕ್ಷಣ, ಬಿಜೆಪಿ ಶಾಸಕರು ಪ್ರಶ್ನೆ ಗಂಟೆಯ ಸಮಯದಲ್ಲಿ ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದರು. ಅಲ್ಲದೆ ಸದನದ ಬಾವಿಗಿಳಿದು ಗದ್ದಲ ಎಬ್ಬಿಸಿದರು.
ಇದಕ್ಕೆ ಪ್ರತಿಯಾಗಿ ಆಡಳಿತಾರೂಢ ಎಎಪಿಯ ಕೆಲ ಶಾಸಕರು ಸಹ ಬಾವಿಗೆ ಪ್ರವೇಶಿಸಿದರು. ಇದರಿಂದ ಪರಿಸ್ಥಿತಿ ಉಲ್ಬಣಗೊಂಡಿತು. ಕೂಡಲೇ ಸ್ಪೀಕರ್ ಸದಸ್ಯರನ್ನು ತಮ್ಮ ಸ್ಥಾನಗಳಿಗೆ ಮರಳಬೇಕು. ಸದನ ನಡೆಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಯಾರೂ ಸ್ಪೀಕರ್ ಮಾತಿಗೆ ಬೆಲೆ ಕೊಡದೆ ಪ್ರತಿಭಟನೆ ನಡೆಸಿದರು.
ಈ ವೇಳೆ ಶಾಸಕ ಓಂ ಪ್ರಕಾಶ್ ಶರ್ಮಾ ಎಎಪಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


