ವಿದೇಶಗಳಿಗೆ 6.4 ಕೋಟಿ ಡೋಸ್ ಕೊರೊನಾ ಲಸಿಕೆ ರವಾನೆ: ಕೇಂದ್ರ ಸರ್ಕಾರ
ಭಾರತ ಸರ್ಕಾರ ಈ ವರೆಗೂ ವಿದೇಶಗಳಿಗೆ 6.4 ಕೋಟಿ ಡೋಸ್ ಕೊರೊನಾ ಲಸಿಕೆ ರವಾನೆ ಮಾಡಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ನವದೆಹಲಿ: ಭಾರತ ಸರ್ಕಾರ ಈ ವರೆಗೂ ವಿದೇಶಗಳಿಗೆ 6.4 ಕೋಟಿ ಡೋಸ್ ಕೊರೊನಾ ಲಸಿಕೆ ರವಾನೆ ಮಾಡಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಈ ಕುರಿತಂತೆ ಕೇಂದ್ರ ಸರ್ಕಾರ ಗುರುವಾರ ಸಂಸತ್ತಿಗೆ ಮಾಹಿತಿ ನೀಡಿದ್ದು, ಈ ವರ್ಷದ ಜನವರಿ 12 ರಿಂದ ಜುಲೈ 22ರ ಅವಧಿಯಲ್ಲಿ ಒಟ್ಟು 6.4 ಕೋಟಿ ಕೋವಿಡ್ ಲಸಿಕೆಗಳನ್ನು ವಿದೇಶಗಳಿಗೆ ಕಳುಹಿಸಿಕೊಟ್ಟಿದೆ.
ಲೋಕಸಭೆಯಲ್ಲಿ ಈ ಕುರಿತು ಲಿಖಿತ ಉತ್ತರ ನೀಡಿದ ನಾಗರಿಕ ವಿಮಾನಯನ ಸಚಿವ ವಿ.ಕೆ.ಸಿಂಗ್ ಅವರು, ಈ ಅವಧಿಯಲ್ಲಿ ಒಟ್ಟಾಗಿ 42.2 ಕೋಟಿ ಡೋಸ್ ಲಸಿಕೆಗಳನ್ನು ವಿಮಾನಗಳ ಮೂಲಕ ರವಾನಿಸಲಾಗಿದೆ. ಈ ಪೈಕಿ 35.8 ಕೋಟಿ ಡೋಸ್ ಲಸಿಕೆಗಳನ್ನು ದೇಶೀಯ ವಿಮಾನಗಳ ಮೂಲಕ ಕಳುಹಿಸಲಾಗಿದೆ.
ಇದೇ ಅವಧಿಯಲ್ಲಿ ದೇಶದಾದ್ಯಂತ ನೀಡಲಾಗಿರುವ ಲಸಿಕೆಯ ಪ್ರಮಾಣ 45 ಕೋಟಿಗೂ ಅಧಿಕವಾಗಿದೆ. ಇವರಲ್ಲಿ 18–44 ವರ್ಷದವರಿಗೆ ನೀಡಿದ 15.38 ಕೋಟಿ ಡೋಸ್ ಲಸಿಕೆಗಳು ಸೇರಿವೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


