ಸಿಬಿಎಸ್ಇ 12ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 12ನೇ ತರಗತಿಯ ಪರೀಕ್ಷಾ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಎಂದಿನಂತೆ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 12ನೇ ತರಗತಿಯ ಪರೀಕ್ಷಾ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಎಂದಿನಂತೆ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. "ಹುಡುಗಿಯರು ಹುಡುಗರಿಗಿಂತ ಶೇಕಡಾ 0.54 ರಷ್ಟು ಉತ್ತಮ ಸಾಧನೆ ಮಾಡಿದ್ದಾರೆ.
70,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ. 95ಕ್ಕಿಂತ ಹೆಚ್ಚಿನ ಅಂಕ ಗಳಿಸಿದ್ದಾರೆ. ಈ ವರ್ಷ ಒಟ್ಟು ಶೇಕಡಾ 99.37 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಈ ಬಾರಿ ಅರ್ಹತಾ ಪಟ್ಟಿಯನ್ನು ಘೋಷಿಸಿಲ್ಲ ಮತ್ತು 65,000ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶ ಇನ್ನೂ ಸಿದ್ಧಪಡಿಸಲಾಗುತ್ತಿದ್ದು, ಆಗಸ್ಟ್ 5 ರೊಳಗೆ ಘೋಷಿಸಲಾಗುವುತ್ತದೆ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಟ್ಟು 70,004 ವಿದ್ಯಾರ್ಥಿಗಳು ಶೇ 95ಕ್ಕಿಂತಲೂ ಹೆಚ್ಚಿನ ಅಂಕ ಗಳಿಸಿದ್ದರೆ, 1,50,152 ವಿದ್ಯಾರ್ಥಿಗಳು ಶೇ. 90ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿದ್ದಾರೆ.
ಈ ಬಾರಿ 6149 ಮಂದಿ ಕಂಪಾರ್ಟ್‌ಮೆಂಟ್‌ನಲ್ಲಿದ್ದಾರೆ(ಐದು ವಿಷಯಗಳ ಪೈಕಿ ಒಂದರಲ್ಲಿ ಫೇಲ್ ಆದವರು). ಕಳೆದ ವರ್ಷ ಈ ಸಂಖ್ಯೆ 87,000ಆಗಿತ್ತು. ಸಿಬಿಎಸ್‌ಇ 13,04,561 ವಿದ್ಯಾರ್ಥಿಗಳ ಫಲಿತಾಂಶ ಘೋಷಿಸಿದೆ. ಒಟ್ಟು 14,30,188 ವಿದ್ಯಾರ್ಥಿಗಳು 12ನೇ ತರಗತಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಈ ವರ್ಷ ಸಿಬಿಎಸ್‌ಇ ಪರೀಕ್ಷೆಗಳನ್ನು ರದ್ದುಪಡಿಸಲಾಗಿತ್ತು. ಹೀಗಾಗಿ ಮಂಡಳಿಯು ಪರ್ಯಾಯ ಮೌಲ್ಯಮಾಪನ ಸೂತ್ರದ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಿದೆ.
ಫಲಿತಾಂಶವು ಮಂಡಳಿಯ ಅಧಿಕೃತ ವೆಬ್‌ಸೈಟ್ cbseresults.nic.in ನಲ್ಲಿ ಲಭ್ಯವಾಗಲಿದೆ. ಅಲ್ಲದೆ digilocker.gov.in ಮತ್ತು ಮೊಬೈಲ್‌ನಲ್ಲಿರುವ ಡಿಜಿಲಾಕರ್ ಅಪ್ಲಿಕೇಷನ್‌ನಲ್ಲೂ ಫಲಿತಾಂಶಗಳನ್ನು ನೋಡಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


