ದೇಶದಲ್ಲಿ 46 ಕೋಟಿ ಡೋಸ್ ದಾಟಿದ ಕೋವಿಡ್-19 ಲಸಿಕೆ ನೀಡಿಕೆ ಪ್ರಮಾಣ- ಕೇಂದ್ರ ಸರ್ಕಾರ
ದೇಶದಲ್ಲಿ ನೀಡಲಾಗಿರುವ ಕೋವಿಡ್-19 ಲಸಿಕೆ ಪ್ರಮಾಣ 46 ಕೋಟಿ ಡೋಸ್ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. ಸಂಜೆ 7 ಗಂಟೆಯ ತಾತ್ಕಾಲಿಕ ವರದಿಯ ಪ್ರಕಾರ, ಶುಕ್ರವಾರ 44,38,901 ಡೋಸ್ ಲಸಿಕೆ ನೀಡಲಾಗಿದೆ.

ನವದೆಹಲಿ: ದೇಶದಲ್ಲಿ ನೀಡಲಾಗಿರುವ ಕೋವಿಡ್-19 ಲಸಿಕೆ ಪ್ರಮಾಣ 46 ಕೋಟಿ ಡೋಸ್ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. ಸಂಜೆ 7 ಗಂಟೆಯ ತಾತ್ಕಾಲಿಕ ವರದಿಯ ಪ್ರಕಾರ, ಶುಕ್ರವಾರ 44,38,901 ಡೋಸ್ ಲಸಿಕೆ ನೀಡಲಾಗಿದೆ.
ಶುಕ್ರವಾರ 18ರಿಂದ 44 ವರ್ಷದೊಳಗಿನ 20,96,446 ಮಂದಿ ಮೊದಲ ಡೋಸ್ ಹಾಗೂ 3,41,500 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಮೂರನೇ ಹಂತದ ಲಸಿಕೆ ಅಭಿಯಾನ ಆರಂಭವಾದಾಗಿನಿಂದಲೂ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 18ರಿಂದ ವರ್ಷದೊಳಗಿನ 15,17,27,430 ಜನರು ಮೊದಲ ಡೋಸ್ ಹಾಗೂ 80,31,011 ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.
ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ 18 ರಿಂದ 44 ವರ್ಷದೊಳಗಿನ 1 ಕೋಟಿ ಗೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ 18 ರಿಂದ 44 ವರ್ಷದೊಳಗಿನ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದಿದ್ದಾರೆ. ಲಸಿಕೆ ಅಭಿಯಾನದ 196ನೇ ದಿನ ಒಟ್ಟು 44,38,901 ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


