ತಮಿಳುನಾಡಿನಲ್ಲಿ ಯಾವುದೇ ನಿರ್ಬಂಧ ಸಡಿಲಿಕೆ ಇಲ್ಲ, ಆಗಸ್ಟ್ 9ರ ವರೆಗೆ ಲಾಕ್‌ಡೌನ್ ವಿಸ್ತರಣೆ
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಶುಕ್ರವಾರ ಯಾವುದೇ ಕೋವಿಡ್ ನಿರ್ಬಂಧಗಳನ್ನು ಸಡಿಲಿಕೆ ಮಾಡದೇ ರಾಜ್ಯದಲ್ಲಿ ಲಾಕ್‌ಡೌನ್ ಅನ್ನು ಆಗಸ್ಟ್ 9 ರವರೆಗೆ ವಿಸ್ತರಿಸಿದ್ದಾರೆ.

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಶುಕ್ರವಾರ ಯಾವುದೇ ಕೋವಿಡ್ ನಿರ್ಬಂಧಗಳನ್ನು ಸಡಿಲಿಕೆ ಮಾಡದೇ ರಾಜ್ಯದಲ್ಲಿ ಲಾಕ್‌ಡೌನ್ ಅನ್ನು ಆಗಸ್ಟ್ 9 ರವರೆಗೆ ವಿಸ್ತರಿಸಿದ್ದಾರೆ.
ಮುಖ್ಯಮಂತ್ರಿಗಳು ತಮ್ಮ ಪ್ರಕಟಣೆಯಲ್ಲಿ, ಜಿಲ್ಲಾಧಿಕಾರಿಗಳು ಮತ್ತು ಪೋಲಿಸರಿಗೆ ನಿರ್ದೇಶನ ನೀಡಿದ್ದು, ಕೋವಿಡ್ -19 ಅನ್ನು ಒಳಗೊಂಡಿರುವ ಮಾರ್ಗಸೂಚಿಗಳನ್ನು ಜಾರಿಗೆ ತರಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ಮುಂದುವರಿಸಿದರೆ ಅಂತಹ ಪ್ರದೇಶಗಳನ್ನು ಸೀಲ್ ಮಾಡುವ ನಿರ್ಧಾರವನ್ನು ಜಿಲ್ಲಾಧಿಕಾರಿಗಳು/ಮುನ್ಸಿಪಲ್ ಕಮಿಷನರ್‌ಗಳು ಮತ್ತು ಪೊಲೀಸರ ವಿವೇಚನೆಗೆ ಸಿಎಂ ಬಿಟ್ಟಿದ್ದಾರೆ.
ಜನರು ಅನಗತ್ಯವಾಗಿ ತಮ್ಮ ಮನೆಗಳಿಂದ ಹೊರಬರಬಾರದು ಮತ್ತು ಸೋಂಕು ಮತ್ತಷ್ಟು ಹರಡುವುದನ್ನು ತಡೆಯಲು ಜನಸಮೂಹದಲ್ಲಿ ಸೇರುವುದನ್ನು ತಪ್ಪಿಸಬೇಕೆಂದು ಸ್ಟಾಲಿನ್ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


