ಪ್ರತಿ ಪಕ್ಷಗಳ ಪ್ರತಿಭಟನೆ: ರಾಜ್ಯಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ಪ್ರತಿಪಕ್ಷಗಳ ಪ್ರತಿಭಟನೆಯ ಪರಿಣಾಮ ರಾಜ್ಯಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಪೆಗಾಸಸ್ ವಿವಾದ, ಕೃಷಿ ಮಸೂದೆಗಳ ವಿಷಯ ಹಾಗೂ ಬೆಲೆ ಏರಿಕೆಯ ವಿಷಯಗಳಲ್ಲಿ ಪ್ರತಿಪಕ್ಷಗಳು ರಾಜ್ಯಸಭೆಯಲ್ಲಿ ನಿರಂತರ ಪ್ರತಿಭಟನೆ ನಡೆಸಿದವು.

ನವದೆಹಲಿ: ಪ್ರತಿಪಕ್ಷಗಳ ಪ್ರತಿಭಟನೆಯ ಪರಿಣಾಮ ರಾಜ್ಯಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಪೆಗಾಸಸ್ ವಿವಾದ, ಕೃಷಿ ಮಸೂದೆಗಳ ವಿಷಯ ಹಾಗೂ ಬೆಲೆ ಏರಿಕೆಯ ವಿಷಯಗಳಲ್ಲಿ ಪ್ರತಿಪಕ್ಷಗಳು ರಾಜ್ಯಸಭೆಯಲ್ಲಿ ನಿರಂತರ ಪ್ರತಿಭಟನೆ ನಡೆಸಿದವು.
ಮಧ್ಯಾಹ್ನದ ಭೋಜನ ವಿರಾಮದ ನಂತರ 2:30 ಗೆ ಪ್ರಾರಂಭವಾದಲಾಪದಲ್ಲಿ ಸಭಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ರಾಜ್ಯಸಭಾ ಸದಸ್ಯರುಗಳಿಗೆ ಸಮಯ ನೀಡಲು ಮುಂದಾದರು.
ಇದಕ್ಕೂ ಮುನ್ನ ಸರ್ಕಾರ ಸೀಮಿತ ಹೊಣೆಗಾರಿಕೆ ಸಹಭಾಗಿತ್ವ (ತಿದ್ದುಪಡಿ) ಮಸೂದೆ, 2021 ಮತ್ತು ಠೇವಣಿ ವಿಮೆ ಮತ್ತು ಸಾಲ ಖಾತರಿ ನಿಗಮ (ತಿದ್ದುಪಡಿ) ಮಸೂದೆ, 2021ಯನ್ನು ಮಂಡಿಸಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಈ ನಡುವೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತೆಂಗು ಅಭಿವೃದ್ಧಿ ಮಂಡಳಿ (ತಿದ್ದುಪಡಿ) ಮಸೂದೆ ಪರಿಗಣಿಸುವ ನಿರ್ಣಯವನ್ನು ಮಂಡಿಸಿದರು.
ಮಸೂದೆ ಅಂಗೀಕಾರ ಹಾಗೂ ಕೃಷಿ ಸಚಿವರ ಭಾಷಣದ ನಡುವೆ ಪ್ರತಿಪಕ್ಷಗಳು ಪ್ರತುಭಟನೆ ನಡೆಸಿದ್ದರ ಪರಿಣಾಮ ಸಭೆಯನ್ನು ಸೋಮವಾರದ ಬೆಳಿಗ್ಗೆ 11 ಗಂಟೆ ವರೆಗೆ ಮುಂದೂಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


