ಕೊರೋನೋತ್ತರ ಆರೋಗ್ಯ ಸಮಸ್ಯೆ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಏಮ್ಸ್‌ಗೆ ದಾಖಲು
ಕೊರೋನೋತ್ತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ನವದೆಹಲಿ: ಕೊರೋನೋತ್ತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನೀರಜ್ ನಿಶ್ಚಲ್ ನೇತೃತ್ವದ ತಂಡ ರಮೇಶ್ ಪೋಖ್ರಿಯಾಲ್ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕೋವಿಡ್ ನಂತರ ಎದುರಾದ ಸಮಸ್ಯೆಗಳಿಂದ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಏಮ್ಸ್ ಗೆ ದಾಖಲಿಸಲಾಗಿದೆ. ಡಾ.ನೀರಜ್ ನಿಶ್ಚಲ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ವರದಿಗಳು ತಿಳಿಸಿವೆ.
ಏಪ್ರಿಲ್ 21ರಂದು ಪೋಖ್ರಿಯಾಲ್ ಅವರಿಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿತ್ತು. ಟ್ವಿಟ್ಟರ್ ಖಾತೆಯ ಮೂಲಕ ಸಚಿವರು ಈ ವಿಚಾರವನ್ನು ದೃಢಪಡಿಸಿದ್ದರು. ಚಿಕಿತ್ಸೆಯ ಬಳಿಕ ಗುಣಮುಖರಾದ ಅವರು ನಂತರ ತನ್ನ ಕೆಲಸಕ್ಕೆ ಮರಳಿದ್ದರು. ಇದೀಗ ಮತ್ತೆ ಅನಾರೋಗ್ಯ ಕಾಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


