ಆಗಸ್ಟ್ ವೇಳೆಗೆ ನಿತ್ಯ 1 ಕೋಟಿ ಜನರಿಗೆ ಲಸಿಕೆ: ಕೇಂದ್ರ ಸರ್ಕಾರ
ಜುಲೈ ಅಥವಾ ಆಗಸ್ಟ್ ವೇಳೆಗೆ ನಿತ್ಯ 1 ಕೋಟಿ ಜನರಿಗೆ ಲಸಿಕೆ ಹಾಕುವಷ್ಟು ಪೂರೈಕೆ ಇರಲಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.

ನವದೆಹಲಿ: ಜುಲೈ ಅಥವಾ ಆಗಸ್ಟ್ ವೇಳೆಗೆ ನಿತ್ಯ 1 ಕೋಟಿ ಜನರಿಗೆ ಲಸಿಕೆ ಹಾಕುವಷ್ಟು ಪೂರೈಕೆ ಇರಲಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಕೋವಿಡ್ ಪಾಸಿಟಿವ್ ದರ ಒಂದು ವಾರದಲ್ಲಿ ಶೇಕಡಾ 5ಕ್ಕಿಂತಲೂ ಕಡಿಮೆ ಇರಬೇಕು ಎಂದು ಸರ್ಕಾರ ತಿಳಿಸಿದೆ.
ಶೇಕಡಾ 70 ರಷ್ಟು ದುರ್ಬಲ ಜನರಿಗೆ ಲಸಿಕೆ ಹಾಕಬೇಕು ಮತ್ತು ಸಾಮೂದಾಯಿಕ ಹೊಣೆಗಾರಿಕೆಯೊಂದಿಗೆ ಕೋವಿಡ್ ನಿಯಮಗಳು ಅನುಷ್ಠಾನಗೊಳ್ಳಬೇಕು ಎಂದು ಸರ್ಕಾರ ಹೇಳಿದೆ.
344 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇಕಡಾ 5ಕ್ಕಿಂತಲೂ ಕಡಿಮೆಯಿದೆ. 30 ರಾಜ್ಯಗಳಲ್ಲಿ ಕಳೆದ ವಾರದಿಂದಲೂ ಕೋವಿಡ್-19 ಸಕ್ರಿಯ ಪ್ರಕರಣಗಳ ಕುಸಿತ ವರದಿಯಾಗಿದೆ. ಗರಿಷ್ಠ ಪ್ರಕರಣಗಳು ದಾಖಲಾಗಿದ್ದ ಮೇ 7 ರಿಂದಲೂ ಬಹುತೇಕವಾಗಿ ಶೇಕಡಾ 69 ರಷ್ಟು ಕೋವಿಡ್ ಪ್ರಕರಣಗಳಲ್ಲಿ ಇಳಿಕೆಯಾಗಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


