ಪುಲ್ವಾಮಾದಲ್ಲಿ ಬಿಜೆಪಿ ಮುಖಂಡನಿಗೆ ಪಾಯಿಂಟ್ ಬ್ಲಾಂಕ್ ನಲ್ಲಿ ಗುಂಡಿಕ್ಕಿ ಹತ್ಯೆ!
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಉಗ್ರರು ಬಿಜೆಪಿ ಮುಖಂಡರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಉಗ್ರರು ಬಿಜೆಪಿ ಮುಖಂಡರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಯೀನ್ ಪ್ರದೇಶದಲ್ಲಿ ಸಂಜೆ ಬಿಜೆಪಿ ಮುಖಂಡ ರಾಕೇಶ್ ಪಂಡಿತರನ್ನು ಉಗ್ರರು ಪಾಯಿಂಟ್-ಬ್ಲಾಂಕ್ ನಲ್ಲಿ ಗುಂಡು ಹಾರಿಸಿ ಕೊಂದಿದ್ದಾರೆ. ಅಲ್ಲದೆ ಉಗ್ರರ ಗುಂಡಿನ ದಾಳಿಯಲ್ಲಿ ಮಹಿಳೆಯೊಬ್ಬರೂ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾಶ್ಮೀರಿ ಪಂಡಿತ್ ಮತ್ತು ಟ್ರಾಲ್ ಮುನ್ಸಿಪಲ್ ಕಮಿಟಿಯ ಕೌನ್ಸಿಲರ್ ಆಗಿರುವ ಪಂಡಿತ್ ಮೇಲೆ ಉಗ್ರರ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಪಂಡಿತ್ ಮೃತಪಟ್ಟಿರುವುದಾಗಿ ದೃಢಪಡಿಸಿದರು. ಇನ್ನು ಗಾಯಗೊಂಡ ಮಹಿಳೆಯನ್ನು ಪಂಡಿತಾಳ ಸ್ನೇಹಿತನ ಮಗಳು ಎಂದು ಹೇಳಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಗ್ರರ ದಾಳಿ ನಡೆದ ಕೂಡಲೇ ಪೊಲೀಸರು ಮತ್ತು ಸಿಆರ್‌ಪಿಎಫ್ ಪಡೆ ಪ್ರದೇಶಕ್ಕೆ ಧಾವಿಸಿ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದೆ. ಮೂವರು ಉಗ್ರರು ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು ಅವರ ಗುರುತು ಪತ್ತೆಯಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸರ್ಕಾರ ನೀಡಿದ್ದ ವೈಯಕ್ತಿಕ ಭದ್ರತಾ ಅಧಿಕಾರಿಗಳನ್ನು ಬಿಟ್ಟು ಟ್ರಾಲ್ ಗೆ ಭೇಟಿ ನೀಡಿದ್ದು ಅವರ ಸಾವಿಗೆ ಕಾರಣವಾಗಿದೆ. ಇನ್ನು ಉಗ್ರದಾಳಿಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


