ಎನ್ ಹೆಚ್ ಆರ್ ಸಿ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ನೇಮಕ
ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಬುಧವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ನವದೆಹಲಿ: ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಬುಧವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಎನ್ಎಚ್ಆರ್ಸಿ ಅಧ್ಯಕ್ಷರಾಗಿದ್ದ ನಿವೃತ್ತ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎಚ್ಎಲ್ ದತ್ತು ಅವರ ಅವಧಿ 2020 ರ ಡಿಸೆಂಬರ್ ನಲ್ಲಿ ಕೊನೆಗೊಂಡಿತ್ತು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು.'ನ್ಯಾಯಮೂರ್ತಿ ಅರುಣ್ ಮಿಶ್ರಾ ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಹೊಸ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ ಎಂದು ಉನ್ನತ ಮೂಲಗಳು ಖಚಿತ ಪಡಿಸಿವೆ.
ಹೊಸ ಎನ್ಎಚ್ಆರ್ಸಿ ಅಧ್ಯಕ್ಷರು ಮತ್ತು ಸದಸ್ಯರನ್ನು ಆಯ್ಕೆ ಪ್ರಕ್ರಿಯೆಯಿಂದ ಕಾಂಗ್ರೆಸ್ ದೂರ ಸರಿದಿದೆ.
ನ್ಯಾಯಮೂರ್ತಿ ಮಿಶ್ರಾ ಅವರ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರ ಸಮಿತಿ ಶಿಫಾರಸು ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


