ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರಗಳು ಜೀವಿತಾವಧಿವರೆಗೂ ಮಾನ್ಯ- ಕೇಂದ್ರ ಶಿಕ್ಷಣ ಸಚಿವ
ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪ್ರಮಾಣ ಪತ್ರಗಳ ಮಾನ್ಯತೆಯನ್ನು ಏಳು ವರ್ಷಗಳಿಂದ ಜೀವಿತಾವಧಿಯವರೆಗೂ ವಿಸ್ತರಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂತ್ ಗುರುವಾರ ಪ್ರಕಟಿಸಿದ್ದಾರೆ.

ನವದೆಹಲಿ: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪ್ರಮಾಣ ಪತ್ರಗಳ ಮಾನ್ಯತೆಯನ್ನು ಏಳು ವರ್ಷಗಳಿಂದ ಜೀವಿತಾವಧಿಯವರೆಗೂ ವಿಸ್ತರಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂತ್ ಗುರುವಾರ ಪ್ರಕಟಿಸಿದ್ದಾರೆ.
2011 ರಿಂದ ಜಾರಿಯಾಗುವಂತೆ ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರಗಳ ಮಾನ್ಯತೆಯನ್ನು ಏಳು ವರ್ಷಗಳಿಂದ ಜೀವಿತಾವಧಿಯವರೆಗೂ ವಿಸ್ತರಿಸಲಾಗಿದೆ ಎಂದು ಸಚಿವರು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.
ಏಳು ವರ್ಷಗಳು ಈಗಾಗಲೇ ಕಳೆದುಕೊಂಡಂತಹ ಅಭ್ಯರ್ಥಿಗಳಿಗೆ ಹೊಸದಾಗಿ ಟಿಇಟಿ ಪ್ರಮಾಣಪತ್ರಗಳನ್ನು ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳುವಂತೆ ಅವರು ಹೇಳಿದ್ದಾರೆ.
ಬೋಧನಾ ಕ್ಷೇತ್ರದಲ್ಲಿ ವೃತ್ತಿಜೀವನ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಇದು ಸಕಾರಾತ್ಮಕ ಹೆಜ್ಜೆಯಾಗಿದೆ ಎಂದು ಪೋಖ್ರಿಯಾಲ್ ತಿಳಿಸಿದ್ದಾರೆ. ಒಬ್ಬ ವ್ಯಕ್ತಿಯು ಶಾಲಾ ಶಿಕ್ಷಕನಾಗಿ ನೇಮಕಗೊಳ್ಳಲು ಅರ್ಹತೆ ಪಡೆಯಲು ಅಗತ್ಯವಾದ ಅರ್ಹತೆಗಳಲ್ಲಿ ಟಿಇಟಿ ಅರ್ಹತಾ ಪ್ರಮಾಣ ಪತ್ರ ಹೊಂದುವುದು ಕೂಡಾ ಒಂದಾಗಿದೆ.
ಎನ್ ಸಿಟಿಇ 2011 ಫೆಬ್ರವರಿಯಲ್ಲಿ ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ನಡೆಸುವ ಟಿಇಟಿ ಪರೀಕ್ಷೆಯಲ್ಲಿ ಪಾಸಾದ ವರ್ಷದಿಂದ ಏಳು ವರ್ಷಗಳವರೆಗೂ ಮಾನ್ಯತೆ ಇರಲಿದೆ ಎಂದು ಹೇಳಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


