ಮಹಾರಾಷ್ಟ್ರದ ಮಹಾ ವಿಕಾಸ್ ಅಗಡಿಯಲ್ಲಿ ಹಲವು 'ಸೂಪರ್ ಸಿಎಂ' ಗಳಿದ್ದಾರೆ: ದೇವೇಂದ್ರ ಫಡ್ನವೀಸ್ ಲೇವಡಿ
ಮಹಾರಾಷ್ಟ್ರದ ಮಹಾ ವಿಕಾಸ್ ಅಗಡಿಯಲ್ಲಿ ಹಲವು ಮಂದಿ ಸೂಪರ್ ಸಿಎಂ ಗಳಿದ್ದು, ಕೇವಲ ಒಬ್ಬರ್ ಮುಖ್ಯಮಂತ್ರಿ ಇದ್ದಾರೆ ಎಂದು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಲೇವಡಿ ಮಾಡಿದ್ದಾರೆ.

ನಾಗಪುರ: ಮಹಾರಾಷ್ಟ್ರದ ಮಹಾ ವಿಕಾಸ್ ಅಗಡಿಯಲ್ಲಿ ಹಲವು ಮಂದಿ ಸೂಪರ್ ಸಿಎಂ ಗಳಿದ್ದು, ಕೇವಲ ಒಬ್ಬರ್ ಮುಖ್ಯಮಂತ್ರಿ ಇದ್ದಾರೆ ಎಂದು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಲೇವಡಿ ಮಾಡಿದ್ದಾರೆ.
ಸರ್ಕಾರಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಸೂಪರ್ ಸಿಎಂ ಗಳು ತೆಗೆದುಕೊಳ್ಳುತ್ತಿದ್ದಾರೆ ಎಂದು ದೇವೇಂದ್ರ ಫಡ್ನವಿಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಹಲವು ಸಚಿವರು ಸೂಪರ್ ಸಿಎಂ ಗಳೆಂದು ತಮ್ಮನ್ನು ಭಾವಿಸಿ ಮಹತ್ವದ ನಿರ್ಧಾರಗಳನ್ನು ಘೋಷಿಸಿ ಕ್ರೆಡಿಟ್ ತೆಗೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಲಾಕ್ ಡೌನ್ ನಿಯಮ ಸಡಿಲಿಕೆ ಕುರಿತಂತೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ ಹಾಗೂ ಆಮ್ಲಜನಕ ಹಾಸಿಗೆಗಳ ಅಗತ್ಯವು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವ ಕಾರಣ ಮಹಾರಾಷ್ಟ್ರದ 18 ಜಿಲ್ಲೆಗಳಲ್ಲಿ ಶುಕ್ರವಾರದಿಂದ (ಜೂನ್ 4) ಕೋವಿಡ್ ನಿರ್ಬಂಧಗಳನ್ನು ತೆಗೆದುಹಾಕಲಾಗುವುದು ಎಂದು ಸಚಿವ ವಿಜಯ ವಾಡೆಟ್ಟಿವರ್ ತಿಳಿಸಿದ್ದರು. ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಫಡ್ನವೀಸ್ ಒತ್ತಾಯಿಸಿದ್ದಾರೆ.
ಸರ್ಕಾರದಲ್ಲಿ ಮುಖ್ಯಮಂತ್ರಿ ಪ್ರಮುಖ ನಿರ್ಧಾರ ಕೈಗೊಳ್ಳಬೇಕು, ಆದರೆ ಸರ್ಕಾರದ ಕೆಲವು ಸಚಿವರು ತಾವೇ ಸಿಎಂ ಎಂದು ಭಾವಿಸಿಕೊಂಡು ನಿರ್ಧಾರ ಪ್ರಕಟಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


