ಬಿಹಾರದ 'ಸೈಕಲ್ ಗರ್ಲ್' ಜ್ಯೋತಿ ಕುಮಾರಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ನೆರವು
ಬಿಹಾರದ ಸೈಕಲ್ ಗರ್ಲ್ ಎಂದೇ ಖ್ಯಾತಿಯಾಗಿರುವ ಜ್ಯೋತಿ ಕುಮಾರ್ ಅವರ ತಂದೆ ನಿಧನರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ನೆರವಿನ ಹಸ್ತ ಚಾಚಿದ್ದಾರೆ.

ಪಾಟ್ನಾ: ಬಿಹಾರದ ಸೈಕಲ್ ಗರ್ಲ್ ಎಂದೇ ಖ್ಯಾತಿಯಾಗಿರುವ ಜ್ಯೋತಿ ಕುಮಾರ್ ಅವರ ತಂದೆ ನಿಧನರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ನೆರವಿನ ಹಸ್ತ ಚಾಚಿದ್ದಾರೆ.
ಗುರುವಾರ ಜ್ಯೋತಿ ಕುಮಾರ್ ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಪ್ರಿಯಾಂಕಾ ಆಕೆಗೆ ಸಮಾಧಾನ ಮಾಡಿದ್ದಾರೆ.
ಮೇ 18 2020 ರಂದು ಜ್ಯೋತಿ ಕುಮಾರಿ ತಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು, ತನ್ನ ಅನಾರೋಗ್ಯದ ತಂದೆಯನ್ನು ಹರಿಯಾಣದ ಗುರುಗ್ರಾಮ್ನಿಂದ ಬಿಹಾರದ ದರ್ಭಂಗಾಗೆ ಸೈಕಲ್ನಲ್ಲಿ ಮನೆಗೆ ಕರೆದೊಯ್ದರು.
ತನ್ನ ತಂದೆಯನ್ನು ಉಳಿಸಿಕೊಳ್ಳಬೇಕೆಂಬ ಉದ್ದೇಶದಿಂದ ತಂದೆಯನ್ನು ಸೈಕಲ್ ನಲ್ಲಿ ಕರೆದುಕೊಂಡು ಹೋಗಿದ್ದ ವಿಷಯವನ್ನು ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹೊಗಳಿದ್ದರು.
ಆದರೆ ತಂದೆ ಮೋಹನ್ ಪಾಸ್ವಾನ್ ನಿಧನದ ನಂತರ ಜ್ಯೋತಿಕುಮಾರಿ ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದಾರೆ, ಅವರೊಬ್ಬರೇ ಮನೆಯಲ್ಲಿ ದುಡಿಯುತ್ತಿದ್ದು, ಕುಟುಂಬದ ಅಗತ್ಯತೆಗಳನ್ನು ಪೂರೈಸುತ್ತಿದ್ದರು.
ಹೀಗಾಗಿ ಆಕೆಗೆ ಕರೆ ಮಾಡಿರುವ ಪ್ರಿಯಾಂಕಾ ಗಾಂಧಿ ವಿಧ್ಯಾಭ್ಯಾಸ ಸೇರಿದಂತೆ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸುವುದಾಗಿ ತಿಳಿಸಿದ್ದಾರೆ. ಪ್ರಿಯಾಂಕಾ ಗಾಂಧಿಯವರೊಂದಿಗೆ ಮಾತನಾಡಿದ ಜ್ಯೋತಿ, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನು ಭೇಟಿ ಮಾಡುವ ಇಚ್ಛೆ ವ್ಯಕ್ತಪಡಿಸಿದರು. ಕೋವಿಡ್ -19 ಸಾಂಕ್ರಾಮಿಕ ರೋಗವು ಮುಗಿದ ಕೂಡಲೆ ನವದೆಹಲಿಯಲ್ಲಿ ಭೇಟಿಯಾಗುವುದಾಗಿ ಭರವಸೆ ಜ್ಯೋತಿಗೆ ಪ್ರಿಯಾಂಕಾ ಭರವಸೆ ನೀಡಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ ಬರೆದ ಸಂತಾಪ ಪತ್ರವನ್ನು ಪಕ್ಷದ ಮುಖಂಡ ಮಶ್ಕೂಲ್ ಅಹ್ಮದ್ ಅವರು ಜ್ಯೋತಿ ಕುಮಾರಿ ಅವರಿಗೆ ಹಸ್ತಾಂತರಿಸಿದರು. ಯಾವುದಕ್ಕೂ ಮುಜುಗರ ಪಡದೆ ಸಹಾಯ ಕೇಳುವಂತೆ ಪ್ರಿಯಾಂಕಾ ಜ್ಯೋತಿ ಕುಮಾರಿ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


