ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ನೇಮಕ!
ಡೈಮಂಡ್ ಹಾರ್ಬರ್ ಸಂಸದ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಮುಖಂಡ ಪಾರ್ಥ ಚಟರ್ಜಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕೋಲ್ಕತ್ತಾ: ಡೈಮಂಡ್ ಹಾರ್ಬರ್ ಸಂಸದ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಮುಖಂಡ ಪಾರ್ಥ ಚಟರ್ಜಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಳೆದ ತಿಂಗಳು ನಡೆದ ವಿಧಾನಸಭೆ ಚುನಾವಣೆಯ ವಿಜಯದ ನಂತರ ಯುವ ಟಿಎಂಸಿ ನಾಯಕನನ್ನು ಪಕ್ಷದ ಮೊದಲ ಸಾಂಸ್ಥಿಕ ಸಭೆಯಲ್ಲಿ ಹೆಚ್ಚಿನ ಜವಾಬ್ದಾರಿಯುತ ಸ್ಥಾನಕ್ಕೆ ಏರಿಸಲಾಯಿತು.
ಅಭಿಷೇಕ್ ಇದುವರೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಯಾಗಿದ್ದ ಸುಬ್ರತಾ ಭಕ್ಷಿ ಅವರ ಸ್ಥಾನಕ್ಕೆ ಬರಲಿದ್ದಾರೆ.
"ನಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಂಸದ ಅಭಿಷೇಕ್ ಬ್ಯಾನರ್ಜಿಯನ್ನು ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿ ನಾಮನಿರ್ದೇಶನ ಮಾಡಿದ್ದಾರೆ" ಎಂದು ಚಟರ್ಜಿ ಹೇಳಿದರು.
ಏತನ್ಮಧ್ಯೆ, ಟಿಎಂಸಿ ಮುಖಂಡರಾಗಿ ಬದಲಾದ ನಟ ಸಾಯೋನಿ ಘೋಷ್ ಅವರನ್ನು ಪಕ್ಷದ ಯುವ ವಿಭಾಗದ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಇದನ್ನು ಈ ವರೆಗೆ ಸಂಸದ ಬ್ಯಾನರ್ಜಿ ವಹಿಸಿಕೊಂಡಿದ್ದರು.
ಪಕ್ಷದಲ್ಲಿ ಒಬ್ಬ ವ್ಯಕ್ತಿಗೆ ಕೇವಲ ಒಂದು ಹುದ್ದೆ ಅಲಂಕರಿಸಲು ಅವಕಾಶ ನೀಡಲಾಗುವುದು ಎಂದು ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಮತ್ತು ಕೋರ್ ಕಮಿಟಿ ತನ್ನ ಅನುಮೋದನೆಯನ್ನು ನೀಡಿದೆ ಎಂದು ಚಟರ್ಜಿ ಹೇಳಿದ್ದಾರೆ. ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಸೇರಲು ಟಿಎಂಸಿಯನ್ನು ತೊರೆದಿದ್ದ ನಾಯಕರ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಮತ್ತು ಈಗ ಅವರೆಲ್ಲಾ ಪಕ್ಷಕ್ಕೆ ಮರಳಲು ಸಿದ್ಧರಿದ್ದಾರೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


