ಪುಣೆಯಲ್ಲಿ ಭೀಕರ ಅಗ್ನಿ ಅವಘಡ; 17 ಕಾರ್ಮಿಕರ ಸಾವು, ಹಲವರು ನಾಪತ್ತೆ
ಮಹಾರಾಷ್ಟ್ರದ ಪುಣೆಯಲ್ಲಿನ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 17 ಕಾರ್ಮಿಕರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆ.

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿನ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 17 ಕಾರ್ಮಿಕರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆ.
ಮೂಲಗಳ ಪ್ರಕಾರ ಪುಣೆಯ ಘೋಟ್ವಾಡೆ ಫಟಾ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 17 ಮಂದಿ ಕಾರ್ಮಿಕರು ಸಾವನ್ನಪ್ಪಿ ಹಲವಾರು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿದ ಕೂಡಲೇ 8ಕ್ಕೂ ಹೆಚ್ಚು ಅಗ್ನಿಶಾಮಕ ದಳ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ.
ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ದೇವೇಂದ್ರ ಪಾಟ್ ಫೋಡೆ ಅವರು, ಈ ವರೆಗೂ 17 ದೇಹಗಳನ್ನು ಹೊರತೆಗೆಯಲಾಗಿದೆ. ಈ ಪೈಕಿ 15 ಮಂದಿ ಮಹಿಳೆಯರು ಇಬ್ಬರು ಪುರುಷರ ಮೃತದೇಹಗಳು ಪತ್ತೆಯಾಗಿವೆ ಎಂದು ಹೇಳಿದ್ದಾರೆ. ಬೆಂಕಿ ನಂದಿಸವ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ ಘಟನೆ ನಡೆದ ಸಂದರ್ಭದಲ್ಲಿ ಕಾರ್ಖಾನೆಯಲ್ಲಿ 37 ಮಂದಿ ಕಾರ್ಮಿಕರು ಇದ್ದರು. ಈ ಪೈಕಿ 20 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


