ದೇಶ

ನಾಮಪತ್ರ ಹಿಂಪಡೆಯಲು ಆಮಿಷ: ಕೇರಳ ಬಿಜೆಪಿ ಮುಖ್ಯಸ್ಥನ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ

ನಾಮಪತ್ರ ಹಿಂಪಡೆಯಲು ಮಂಜೇಶ್ವರದ ಬಿಎಸ್ ಪಿ ಅಭ್ಯರ್ಥಿಗೆ ಆಮಿಷವೊಡ್ಡಿದ್ದ ಆರೋಪ ಹಿನ್ನಲೆ ಕೇರಳ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ.

ನಾಮಪತ್ರ ಹಿಂಪಡೆಯಲು ಆಮಿಷ: ಕೇರಳ ಬಿಜೆಪಿ ಮುಖ್ಯಸ್ಥನ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ
ಕೆ ಸುರೇಂದ್ರನ್
Published On :

ಕಾಸರಗೋಡು: ನಾಮಪತ್ರ ಹಿಂಪಡೆಯಲು ಮಂಜೇಶ್ವರದ ಬಿಎಸ್ ಪಿ ಅಭ್ಯರ್ಥಿಗೆ ಆಮಿಷವೊಡ್ಡಿದ್ದ ಆರೋಪ ಹಿನ್ನಲೆ ಕೇರಳ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ. 

ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಮತ್ತು ಮಂಜೇಶ್ವರ ಎಲ್‌ಡಿಎಫ್ ಅಭ್ಯರ್ಥಿ ವಿ ವಿ ರಮೇಶನ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕಾಸರಗೋಡಿನ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ - II ಈ ನಿರ್ದೇಶನ ನೀಡಿದೆ. 

"ಚುನಾವಣೆಯಿಂದ ಹಿಂದೆ ಸರಿಯಲು ಲಂಚ ನೀಡಲಾಗಿದೆ ಎಂದು ಹೇಳಿದ ಕೆ ಸುಂದರ ಅವರ ಹೇಳಿಕೆಗಳ ಬಗ್ಗೆ ಪೊಲೀಸ್ ತನಿಖೆ ನಡೆಸಬೇಕೆಂದು ಒತ್ತಾಯಿಸಿ ನಾವು ನ್ಯಾಯಾಲಯ ಮೆಟ್ಟಿಲೇರಿದ್ದೇವೆ ಎಂದು ರಮೇಶನ್ ಪರ ವಕೀಲ ಸಿ.ಶುಕೂರ್ ಹೇಳಿದರು.

ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರದ ಬಿಎಸ್ ಪಿ ಅಭ್ಯರ್ಥಿಯಾಗಿದ್ದ ಕೆ. ಸುಂದರ್ ಮಾರ್ಚ್ 22ರಂದು ತಮ್ಮ ನಾಮಪತ್ರ ಹಿಂಪಡೆದಿದ್ದರು. ಕೆ. ಸುಂದರ ಮತ್ತು ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಹೆಸರು ತಾಳೆಯಾಗುವುದರಿಂದ ನಾಮಪತ್ರ ಹಿಂಪಡೆಯುವಂತೆ ಆಮಿಷ ಒಡ್ಡಿದ್ದರು ಎಂದು ಆರೋಪಿಸಲಾಗಿದೆ. 

ಬಿಜೆಪಿ ನಾಯಕರು ನಾಮಪತ್ರ ಹಿಂಪಡೆದುಕೊಳ್ಳುವಂತೆ ಆಮಿಷವೊಡ್ಡಿದ್ದರು. ನಾನು 15 ಲಕ್ಷ ರೂಪಾಯಿ ಕೇಳಿದ್ದೆ. ಆದರೆ ಅವರು ನನಗೆ ಕೇವಲ 2.5 ಲಕ್ಷ ರೂಪಾಯಿ ಹಾಗೂ 15 ಸಾವಿರ ಮೌಲ್ಯದ ಮೊಬೈಲ್ ಫೋನ್ ನೀಡಿದ್ದರು. ಮಂಜೇಶ್ವರದಲ್ಲಿ ಬಿಜೆಪಿ ಗೆದ್ದರೆ ಕರ್ನನಾಟಕದಲ್ಲಿ ಒಂದು ಮದ್ಯದ ಅಂಗಡಿಗೆ ಅವಕಾಶ ಕೊಡಿಸಬೇಕು ಎಂದು ಕೇಳಿದ್ದರೆ. ಆದರೆ ಚುನಾವಣೆ ಮುಗಿದ ನಂತರ ಯಾರೂ ನನ್ನನ್ನು ಸಂಪರ್ಕಿಸಲಿಲ್ಲ ಎಂದು ಸುಂದರ ಆರೋಪಿಸಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.