ಸುಮಾರು ಮೂರು ವಾರಗಳ ನಂತರ ದೆಹಲಿ ಮೆಟ್ರೋ ರೈಲು ಸೇವೆ ಪುನಾರಾರಂಭ!
ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ಪರಿಸ್ಥಿತಿ ಸುಧಾರಣೆ ಹಿನ್ನೆಲೆಯಲ್ಲಿ ಸುಮಾರು ಮೂರು ವಾರಗಳ ನಂತರ ಮೆಟ್ರೋ ರೈಲು ಸೇವೆ ಇಂದಿನಿಂದ ಪುನರಾರಂಭವಾಗಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ಪರಿಸ್ಥಿತಿ ಸುಧಾರಣೆ ಹಿನ್ನೆಲೆಯಲ್ಲಿ ಸುಮಾರು ಮೂರು ವಾರಗಳ ನಂತರ ಮೆಟ್ರೋ ರೈಲು ಸೇವೆ ಇಂದಿನಿಂದ ಪುನರಾರಂಭವಾಗಿದೆ. ಆದರೆ, ಶೇ.50ರಷ್ಟು ಆಸನ ಸಾಮರ್ಥ್ಯಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಪ್ರಯಾಣಿಕರು ನಿಂತುಕೊಂಡು ಪ್ರಯಾಣಿಸುವಂತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಮೇ 20 ರಿಂದಲೂ ದೆಹಲಿ ಮೆಟ್ರೋ ರೈಲು ನಿಗಮ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿತ್ತು. ಇದಕ್ಕೂ ಮುನ್ನ ಏಪ್ರಿಲ್ 19 ರಂದು ಭಾಗಶ:ವಾಗಿ ಸೇವೆಯನ್ನು ನಿಲ್ಲಿಸಲಾಗಿತ್ತು. ಅವಶ್ಯಕ ಸೇವೆಗಳ ಜನರು ಮಾತ್ರ ಸಂಚರಿಸಲು ಅವಕಾಶ ನೀಡಲಾಗಿತ್ತು. ನಂತರ ಕೋವಿಡ್-19 ಎರಡನೇ ಅಲೆಯಲ್ಲಿ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮೇ 10ರಿಂದಲೂ ಅದನ್ನು ಕೂಡಾ ಸ್ಥಗಿತಗೊಳಿಸಲಾಗಿತ್ತು.
ಇಂದು ಬೆಳಗ್ಗೆ 6 ಗಂಟೆಯಿಂದ ಮೆಟ್ರೋ ರೈಲು ಸೇವೆ ಪುನಾರಾರಂಭವಾಗಿದೆ. ವಿವಿಧ ಮಾರ್ಗಗಳಲ್ಲಿ ಐದರಿಂದ 15 ನಿಮಿಷಗಳಿಗೆ ಒಂದು ರೈಲಿನಂತೆ ಕೇವಲ ಅರ್ಧದಷ್ಟು ರೈಲುಗಳು ಸೇವೆ ಆರಂಭಿಸಿರುವುದಾಗಿ ಡಿಎಂಆರ್ ಸಿ ಅಧಿಕಾರಿಗಳು ಹೇಳಿದ್ದಾರೆ.
ವಿವಿಧ ಸಡಿಲತೆಯನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಘೋಷಿದ ಬೆನ್ನಲ್ಲೇ, ಇಂದಿನಿಂದ ಅರ್ಧ ಸಾಮರ್ಥ್ಯದೊಂದಿಗೆ ಮೆಟ್ರೋ ರೈಲು ಸಂಚರಕ್ಕೆ ಅವಕಾಶ ಕಲ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


