ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,00,636 ಹೊಸ ಕೊರೋನಾ ಕೇಸ್ ಪತ್ತೆ: 2,427 ಮಂದಿ ಒಂದೇ ದಿನ ಸಾವು
ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಈಗ ಸ್ವಲ್ಪ ಕಡಿಮೆಯಾಗುತ್ತಿದೆ. ಸೋಮವಾರ ಬೆಳಗ್ಗೆ 8 ಗಂಟೆಯ ಹೊತ್ತಿಗೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,00,636 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.

ನವದೆಹಲಿ: ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಈಗ ಸ್ವಲ್ಪ ಕಡಿಮೆಯಾಗುತ್ತಿದೆ. ಸೋಮವಾರ ಬೆಳಗ್ಗೆ 8 ಗಂಟೆಯ ಹೊತ್ತಿಗೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,00,636 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,427 ಮಂದಿ ಕೋವಿಡ್ ಗೆ ಬಲಿಯಾಗಿದ್ದು, 1,74,399 ಮಂದಿ ಬಿಡುಗಡೆ ಹೊಂದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,89,09,975 ಇದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,49,186ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,01,609ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 1,74,399 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,89,09,975ಕ್ಕೆ ತಲುಪಿದೆ.ದೇಶದಲ್ಲಿ ಇದುವರೆಗೆ 36,63,34,111 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ನಿನ್ನೆ ಒಂದೇ ದಿನ 15,87,589 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


