ದೇಶ

ಮುಂಬೈ ಬಾಂದ್ರಾ ಪ್ರದೇಶದಲ್ಲಿ ಕಟ್ಟಡ ಕುಸಿತ: ಓರ್ವ ಸಾವು, ಐವರಿಗೆ ಗಂಭೀರ ಗಾಯ

ಮಹಾನಗರಿ ಮುಂಬೈಯ ಬಾಂದ್ರಾ ಪ್ರದೇಶದಲ್ಲಿ ಮನೆ ಕುಸಿದು ಓರ್ವ ಮೃತಪಟ್ಟು, ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಪ್ರಕರಣ ಸೋಮವಾರ ನಸುಕಿನ ಜಾವ ಸಂಭವಿಸಿದೆ.

ಮುಂಬೈ ಬಾಂದ್ರಾ ಪ್ರದೇಶದಲ್ಲಿ ಕಟ್ಟಡ ಕುಸಿತ: ಓರ್ವ ಸಾವು, ಐವರಿಗೆ ಗಂಭೀರ ಗಾಯ
ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ವಾಹನ
Published On :

ಮುಂಬೈ: ಮಹಾನಗರಿ ಮುಂಬೈಯ ಬಾಂದ್ರಾ ಪ್ರದೇಶದಲ್ಲಿ ಕಟ್ಟಡ ಕುಸಿದು ಓರ್ವ ಮೃತಪಟ್ಟು, ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಪ್ರಕರಣ ಸೋಮವಾರ ನಸುಕಿನ ಜಾವ ಸಂಭವಿಸಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜೀಶನ್ ಸಿದ್ದಿಖಿ ತಿಳಿಸಿದ್ದಾರೆ.

17 ಮಂದಿ ರಕ್ಷಣೆ: ಕಟ್ಟಡ ಕುಸಿದು ಸಿಕ್ಕಿಹಾಕಿಕೊಂಡಿದ್ದ 17 ಮಂದಿಯನ್ನು ಕಾಪಾಡಲಾಗಿದೆ. ಬಾಂದ್ರಾ ಪೂರ್ವ ಪ್ರದೇಶದ ಖೆರವಾಡಿ ರಸ್ತೆ ಪ್ರದೇಶದಲ್ಲಿ ನಸುಕಿನ ಜಾವ 2 ಗಂಟೆ ಸುಮಾರಿಗೆ ಮನೆ ಮತ್ತೊಂದು ಕಟ್ಟಡ ಮತ್ತೊಂದು ಕಟ್ಟಡದ ಮೇಲೆ ಕುಸಿದು ಬಿದ್ದು ಈ ದುರ್ಘಟನೆ ನಡೆದಿದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.