ಈವರೆಗೆ ಸುಮಾರು 24.65 ಕೋಟಿ ಡೋಸ್ ಕೋವಿಡ್ ಲಸಿಕೆ ರಾಜ್ಯಗಳಿಗೆ ಪೂರೈಕೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ ಸುಮಾರು 24 ಕೋಟಿ ಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಯನ್ನು ಕೇಂದ್ರ ಸರ್ಕಾರ ಪೂರೈಸಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ.

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ ಸುಮಾರು 24 ಕೋಟಿ ಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಯನ್ನು ಕೇಂದ್ರ ಸರ್ಕಾರ ಪೂರೈಸಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ.
ಉಚಿತ ದರ ಹಾಗೂ ರಾಜ್ಯಗಳಿಂದ ನೇರ ಖರೀದಿ ಹಂತದಲ್ಲಿ ಈವರೆಗೂ 24 ಕೋಟಿಗೂ ಹೆಚ್ಚು (24,65,44,060) ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸಲಾಗಿದೆ. 23,47,43,489 ಡೋಸ್ ವ್ಯರ್ಥ ಡೋಸ್ ಕೂಡಾ ಇದರಲ್ಲಿ ಸೇರಿದೆ ಎಂದು ಇಂದು ಬೆಳಗ್ಗೆ ಮಾಹಿತಿ ನೀಡಲಾಗಿದೆ.
ಲಸಿಕೆ ನೀಡಿಕೆಗಾಗಿ 1,19,46,925 ಡೋಸ್ ಕೋವಿಡ್ ಲಸಿಕೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಸಚಿವಾಲಯ ಹೇಳಿದೆ. ಮೂರನೇ ಹಂತದ ಕೋವಿಡ್-19 ಲಸಿಕೆ ಅಭಿಯಾನ ಮೇ 1ರಿಂದ ಆರಂಭವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


