ಚುನಾವಣಾ ಆಯೋಗದ ನೂತನ ಮುಖ್ಯಸ್ಥರಾಗಿ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರಪಾಂಡೆ ನೇಮಕ
ಉತ್ತರ ಪ್ರದೇಶ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರಪಾಂಡೆ ಅವರು ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ನೇಮಕವಾಗಿದ್ದಾರೆ.

ನವದೆಹಲಿ: ಉತ್ತರ ಪ್ರದೇಶ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರಪಾಂಡೆ ಅವರು ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ನೇಮಕವಾಗಿದ್ದಾರೆ.
ಈ ಕುರಿತಂತೆ ಕೇಂದ್ರ ಕಾನೂನು ಮತ್ತು ಸಂಸದೀಯ ಸಚಿವಾಲಯ ಅಧಿಸೂಚನೆ ಹೊರಡಿಸಿದ್ದು, ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರಪಾಂಡೆ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ನೇಮಕ ಮಾಡಿದ್ದಾರೆ ಎಂದು ಹೇಳಿದೆ.
ಭಾರತೀಯ ಆಡಳಿತ ಸೇವೆಯ 1984ರ ಕೇಡರ್ ನ ಅಧಿಕಾರಿಯಾಗಿದ್ದ ಅನೂಪ್ ಚಂದ್ರಪಾಂಡೆ ಅವರು 2019 ಆಗಸ್ಟ್ ನಲ್ಲಿ ಉತ್ತರ ಪ್ರದೇಶ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿದ್ದರು. ಇದೀಗ ಚುನಾವಣಾ ಆಯೋಗದ ಇಬ್ಬರು ಮುಖ್ಯಸ್ಥರುಗಳ ಪೈಕಿ ಒಂದು ಸ್ಥಾನಕ್ಕೆ ಆಯ್ಕೆಯಾಗಿದ್ದು, ಇವರೊಟ್ಟಿಗೆ ರಾಜೀವ್ ಕುಮಾರ್ ಅವರು ಕೂಡ ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


