ಕೋವಿಡ್ ಲಸಿಕೆ ಪ್ರಮಾಣಪತ್ರದ ವೈಯಕ್ತಿಕ ವಿವರ ತಿದ್ದಲು ಆನ್ ಲೈನ್ ಮೂಲಕ ಅವಕಾಶ: ಕೇಂದ್ರ ಸರ್ಕಾರ
ಕೋವಿಡ್ ಲಸಿಕೆ ಹಾಕಿಸಿಕೊಂಡ ನಂತರ ನೀಡಲಾಗಿರುವ ಪ್ರಮಾಣಪತ್ರದಲ್ಲಿ ನಮೂದಾಗಿರುವ ವೈಯಕ್ತಿಕ ವಿವರಗಳನ್ನು ತಿದ್ದುಪಡಿ ಮಾಡಿಕೊಳ್ಳುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ.

ನವದೆಹಲಿ: ಕೋವಿಡ್ ಲಸಿಕೆ ಹಾಕಿಸಿಕೊಂಡ ನಂತರ ನೀಡಲಾಗಿರುವ ಪ್ರಮಾಣಪತ್ರದಲ್ಲಿ ನಮೂದಾಗಿರುವ ವೈಯಕ್ತಿಕ ವಿವರಗಳನ್ನು ತಿದ್ದುಪಡಿ ಮಾಡಿಕೊಳ್ಳುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ.
ಫಲಾನುಭವಿಗಳು ‘ಕೋವಿನ್’ ವೆಬ್ಸೈಟ್ಗೆ ಭೇಟಿ ನೀಡಿ ತಿದ್ದುಪಡಿಗಳನ್ನು ಮಾಡಬಹುದು. ಲಸಿಕೆ ಪ್ರಮಾಣಪತ್ರದಲ್ಲಿ ಹೆಸರು, ಜನ್ಮದಿನಾಂಕ, ಲಿಂಗ ಸೇರಿದಂತೆ ಇತರ ವಿವರಗಳು ತಪ್ಪಾಗಿ ನಮೂದಾಗಿದ್ದರೆ ಅವುಗಳನ್ನು ಸರಿಪಡಿಸಬಹುದು ಎಂದು ಆರೋಗ್ಯ ಸೇತು ಆ್ಯಪ್ನ ಟ್ವಿಟರ್ ಖಾತೆಯಲ್ಲಿ ಬುಧವಾರ ತಿಳಿಸಲಾಗಿದೆ.
‘ಕೋವಿನ್ ಲಸಿಕೆ ಪ್ರಮಾಣಪತ್ರ’ವನ್ನು ಪ್ರಯಾಣದ ಸಂದರ್ಭದಲ್ಲಿ ಹಾಗೂ ಇತರ ಕೆಲವು ನಿರ್ದಿಷ್ಟ ಸೇವೆಗಳನ್ನು ಪಡೆಯುವಾಗ ಹಾಜರುಪಡಿಸಬೇಕಾಗುತ್ತದೆ.
‘ಕೋವಿನ್’ ಪೋರ್ಟಲ್ನಲ್ಲಿ ನೋಂದಣಿ ಸಮಯದಲ್ಲಿ ನೀಡಿರುವ ಮೊಬೈಲ್ ಸಂಖ್ಯೆಯನ್ನು ಬಳಸಿ ಲಸಿಕೆಯ ಎಷ್ಟನೇ ಡೋಸ್ ಪಡೆಯಲಾಗಿದೆ ಎಂಬ ವಿವರವನ್ನು ಸಹ ಅಪ್ಡೇಟ್ ಮಾಡಬಹುದು ಎಂದೂ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


