ಗಡ್ಡ ತೆಗೆಯಲು ಪ್ರಧಾನಿಗೆ 100 ರೂಪಾಯಿ ಕಳಿಸಿದ ಟೀ ಮಾರಾಟಗಾರ: ಮೋದಿಗೆ ಆತ ಕಳಿಸಿದ ಸಂದೇಶ ಇದು...
ಮಹಾರಾಷ್ಟ್ರದ ಬಾರಾಮತಿಯ ಟೀ ಮಾರಾಟಗಾರ ಪ್ರಧಾನಿ ನರೇಂದ್ರ ಮೋದಿಗೆ ಗಡ್ಡ ತೆಗೆಯುವುದಕ್ಕೆ 100 ರೂಪಾಯಿ ಕಳಿಸಿಕೊಟ್ಟಿದ್ದು, ಪತ್ರವನ್ನು ಬರೆದಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಬಾರಾಮತಿಯ ಟೀ ಮಾರಾಟಗಾರ ಪ್ರಧಾನಿ ನರೇಂದ್ರ ಮೋದಿಗೆ ಗಡ್ಡ ತೆಗೆಯುವುದಕ್ಕೆ 100 ರೂಪಾಯಿ ಕಳಿಸಿಕೊಟ್ಟಿದ್ದು, ಪತ್ರವನ್ನು ಬರೆದಿದ್ದಾರೆ.
ಕಳೆದ ಒಂದೂವರೆ ವರ್ಷದಲ್ಲಿ ಕೊರೋನಾ, ಲಾಕ್ ಡೌನ್ ನಿಂದ ಅಸಂಘಟಿತ ವಲಯ ತೀವ್ರವಾಗಿ ಕುಸಿತ ಕಂಡಿದೆ. ಇದರಿಂದ ತೀವ್ರವಾಗಿ ಬೇಸತ್ತ ಟೀ ವ್ಯಾಪಾರಿ ಅನಿಲ್ ಮೋರೆ, ಪ್ರಧಾನಿಗೆ ಪತ್ರ ಬರೆದಿದ್ದು, ಪ್ರಧಾನಿ ಗಡ್ಡ ಬೆಳೆಸಿದ್ದಾರೆ. ಆದರೆ ಏನನ್ನಾದರೂ ಬೆಳೆಸುವುದಾದರೆ ದೇಶದ ಜನತೆಗೆ ಉದ್ಯೋಗಾವಕಾಶಗಳನ್ನು ಬೆಳೆಸಿ, ಲಸಿಕೆಯನ್ನು ಹೆಚ್ಚಿಸಿ, ಈಗಿರುವ ವೈದ್ಯಕೀಯ ಸೌಲಭ್ಯಗಳನ್ನು ಏರಿಕೆ ಮಾಡಿ ಎಂದು ಪತ್ರದಲ್ಲಿ ಬರೆದಿದ್ದಾರೆ.
ಕಳೆದ 2 ಲಾಕ್ ಡೌನ್ ಗಳಿಂದ ಕಂಗೆಟ್ಟಿರುವ ಜನತೆಯ ಸಮಸ್ಯೆಗಳು ನಿವಾರಣೆಯಾಗುವುದನ್ನು ಪ್ರಧಾನಿ ಮೋದಿ ಖಾತ್ರಿಪಡಿಸಿಕೊಳ್ಳಬೇಕು ಎಂದು ಟೀ ಮಾರಾಟ ಮಾಡುವ ಅನಿಲ್ ಮೋರೆ ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿಗಳ ಹುದ್ದೆ ದೇಶದ ಅತ್ಯುನ್ನತ ಹುದ್ದೆಯಾಗಿದೆ. ಪ್ರಧಾನಿಗಳ ಬಗ್ಗೆ ಅವರ ಆಡಳಿತದ ಬಗ್ಗೆ ಗೌರವವಿದೆ. ನನ್ನ ಉಳಿತಾಯದ ಹಣದಿಂದ 100 ರೂಪಾಯಿಗಳನ್ನು ನಾನು ಅವರಿಗೆ ಗಡ್ಡ ತೆಗೆಸಿಕೊಳ್ಳುವುದಕ್ಕಾಗಿ ಕಳಿಸುತ್ತಿದ್ದೇನೆ. ಅವರು ಅತ್ಯುನ್ನತ ನಾಯಕ ಅವರಿಗೆ ಅವಮಾನ ಮಾಡುವುದು ನನ್ನ ಉದ್ದೇಶವಲ್ಲ. ದೇಶದ ಬಡ ಜನತೆ ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಅವರ ಗಮನ ಸೆಳೆಯುವುದಕ್ಕಾಗಿ ಈ ರೀತಿ ಮಾಡಿದ್ದೇನೆ" ಎಂದು ಅನಿಲ್ ಮೋರೆ ತಿಳಿಸಿದ್ದಾರೆ.
ಕೋವಿಡ್-19 ನಿಂದ ಕುಟುಂಬ ಸದಸ್ಯರನ್ನು ಕಳೆದುಕೊಂಡಿರುವವರಿಗೆ 5 ಲಕ್ಷ ರೂಪಾಯಿ ಹಾಗೂ ಲಾಕ್ ಡೌನ್ ನಿಂದ ಸಂಕಷ್ಟ ಎದುರಿಸುತ್ತಿರುವವರಿಗೆ 30,000 ರೂಪಾಯಿಗಳನ್ನು ನೀಡುವುದಕ್ಕೆ ಪ್ರಧಾನಿಗಳಿಗೆ ಪತ್ರದ ಮೂಲಕ ಒತ್ತಾಯ ಮಾಡಿದ್ದೇನೆ ಎಂದು ಅನಿಲ್ ಮೋರೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


