ನಿಮ್ಮ ಚಳುವಳಿ ಇಡೀ ದೇಶಕ್ಕಾಗಿ ಇದೆ: ರೈತರ ಪ್ರತಿಭಟನೆಗೆ ಮಮತಾ ಬೆಂಬಲ
ಕೇಂದ್ರ ಸರ್ಕಾರ 2020 ರಲ್ಲಿ ಜಾರಿಗೆ ತಂದಿದ್ದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕೋಲ್ಕತ್ತ: ಕೇಂದ್ರ ಸರ್ಕಾರ 2020 ರಲ್ಲಿ ಜಾರಿಗೆ ತಂದಿದ್ದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ರಾಕೇಶ್ ಟಿಕಾಯತ್ ಹಾಗೂ ಯುಧ್ವೀರ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತನಾಡಿದ ಬಳಿಕ ಮಾತನಾಡಿರುವ ಮಮತಾ ಬ್ಯಾನರ್ಜಿ ರಾಜ್ಯಗಳು ನೀತಿಗಳ ವಿಷಯವಾಗಿ ಸಂವಾದ ನಡೆಸುವುದಕ್ಕೆ ವೇದಿಕೆ ಇರಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜ್ಯಗಳನ್ನು ಮೌನವಾಗಿಸುವುದು ಒಕ್ಕೂಟ ವ್ಯವಸ್ಥೆಗೆ ಒಳಿತಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ನಿಮ್ಮ ಚಳುವಳಿ ಇಡೀ ದೇಶಕ್ಕಾಗಿ ಇದೆ ನಿಮ್ಮ ಚಳುವಳಿಗೆ ಬೆಂಬಲ ಇದೆ ಎಂದು ಮಮತಾ ಬ್ಯಾನರ್ಜಿ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಪಶ್ಚಿಮ ಬಂಗಾಳದಾಚೆಗೂ ವಿಸ್ತರಿಸುವ ಯೋಜನೆಯನ್ನು ಘೋಷಿಸಿದ ಬೆನ್ನಲ್ಲೇ ಉತ್ತರ ಭಾರತ ಮೂಲದ ರೈತ ಸಂಘಟನೆಗಳಿಗೆ ಟಿಎಂಸಿ ಬೆಂಬಲ ಘೋಷಿಸಿದೆ. ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ನೋ ವೋಟ್ ಫಾರ್ ಬಿಜೆಪಿ ಅಭಿಯಾನಕ್ಕೆ ಟಿಕಾಯತ್ ನೇತೃತ್ವದ ಭಾರತೀಯ ಕಿಸಾನ್ ಯೂನಿಯನ್ ಹಾಗೂ ಸಿಂಗ್ ಬೆಂಬಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


